

ವಿಮುಕ್ತ ದೇವದಾಸಿಯರ ಅವಲಂಬಿತರಿಗೆ ಕಾರ್ಯಾಗಾರ
ಕುಷ್ಟಗಿ: ವಿಮುಕ್ತ ದೇವದಾಸಿಯರ ಮಕ್ಕಳ ಜೀವನೋಪಾಯಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಹೇಳಿದರು.
ಪಟ್ಟಣದ ವೀರಮಹೇಶ್ವರ ಸಮುದಾಯ ಭವನದಲ್ಲಿ ಕೌಶಲಾಭಿವೃದ್ಧಿ, ಉದ್ಯಮಶೀಲ ಮತ್ತು ಜೀವನೋಪಾಯ ಇಲಾಖೆ ಹಾಗೂ ವಿಮುಕ್ತ ದೇವದಾಸಿ ವೇದಿಕೆ ಸಹಯೋಗದಲ್ಲಿ ಮಂಗಳವಾರ ವಿಮುಕ್ತ ದೇವದಾಸಿಯರ ಅವಲಂಬಿತರಿಗಾಗಿ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಇಲಾಖೆ ಮೂಲಕ ತರಬೇತಿ ನೀಡಲಾಗುವುದು. ನಂತರ ಕೈಗೊಳ್ಳುವ ಸ್ವಯಂ ಉದ್ಯೋಗಕ್ಕೆ ಬ್ಯಾಂಕ್‌ನಿಂದ ಸಾಲ ಸೌಲಭ್ಯ ಕಲ್ಪಿಸಲಾಗುವುದು. ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲೂ ಕ್ರಮ ಕೈಗೊಳ್ಳಲಾಗುವುದು. ಈ ವಿಚಾರದಲ್ಲಿ ಜಿಪಂ ಸಿಇಒ ಸಹ ಹೆಚ್ಚಿನ ಮುತುವರ್ಜಿ ವಹಿಸುತ್ತಿದ್ದಾರೆ. ತರಬೇತಿಯ ಸದುಪಯೋಗ ಪಡೆದು ಸ್ವಾವಲಂಬಿ ಜೀವನ ನಡೆಸುವಂತೆ ತಿಳಿಸಿದರು.