

ಕುಷ್ಟಗಿ: ರೈತ, ದಲಿತ ಹಾಗೂ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವ ವರೆಗೆ ಹೋರಾಟ ಮುಂದುವರಿಯಲಿದೆ ಎಂಬ ಘೋಷ ವಾಕ್ಯದೊಂದಿಗೆ ರೈತ ಪರ ಸಂಘಟನೆಗಳ ಪದಾಧಿಕಾರಿಗಳು ಪಟ್ಟಣದ ಬಸವ ಭವನದ ಎದುರು ಶನಿವಾರ ಉಪವಾಸ ನಿರಶನ ನಡೆಸಿದರು.
ದೇಶದ ರೈತರಿಗೆ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸುವ ಅಧಿಕಾರವಿದೆ. ದೇಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಹತ್ತಿಕ್ಕುವ ಕಾರ್ಯವನ್ನು ಕೇಂದ್ರ ಸರ್ಕಾರ ಮಾಡಿದೆ. ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯದ ಹೊರತು ದೇಶವ್ಯಾಪಿ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.