ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರಗೆ ಕರೊನಾ ಸೋಂಕು ದೃಢ

Amaregouda Bayyapura
Published on

ಕುಷ್ಟಗಿ: ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರಗೆ ಕರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಶಾಸಕರ ಆಪ್ತ ಸಹಾಯಕ ಹನುಮೇಶ ಶೆಟ್ಟರ್ ತಿಳಿಸಿದ್ದಾರೆ.

ರೋಗದ ಯಾವುದೇ ಲಕ್ಷಣಗಳಿಲ್ಲ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಸಕರು ಶೀಘ್ರ ಗುಣಮುಖರಾಗಲಿದ್ದಾರೆ. ಅವರ ನೇರ ಸಂಪರ್ಕದಲ್ಲಿದ್ದವರು ರೋಗ ಲಕ್ಷಣ ಕಂಡುಬಂದಲ್ಲಿ ಕೂಡಲೇ ಪರೀಕ್ಷಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net