ಕುಷ್ಟಗಿ ಪುರಸಭೆ ಉಪಚುನಾವಣೆಯಲ್ಲಿ ಅರಳಿದ ಕಮಲ

06092021 Kustagi by election bjp win
Published on

ಕುಷ್ಟಗಿ: ಪುರಸಭೆಯ 16ನೇ ವಾರ್ಡ್‌ಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯ ಅಕ್ಕಮಹಾದೇವಿ ನಾಯಕವಾಡಿ, ಕಾಂಗ್ರೆಸ್ ಅಭ್ಯರ್ಥಿ ಪಾರ್ವತಿ ಬಂಡಿ ವಿರುದ್ಧ 166 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ವಾರ್ಡ್‌ನಲ್ಲಿ 948 ಮತದಾರರಿದ್ದು, 715 ಮತಗಳು ಚಲಾವಣೆಯಾಗಿದ್ದವು. ಅಕ್ಕಮಹಾದೇವಿ ನಾಯಕವಾಡಿ 438 ಮತಗಳನ್ನು ಪಡೆದಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದರೂ ಪುರಸಭೆಯಲ್ಲಿ ಬಿಜೆಪಿ ಆಡಳಿತವಿದೆ. ಉಪಚುನಾವಣೆಯಲ್ಲಿ ಕೂಡ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿರುವುದು ಕಾಂಗ್ರೆಸ್‌ಗೆ ಮತ್ತೆ ಹಿನ್ನಡೆಯಾದಂತಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net