20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ; ನಿಡಶೇಸಿ ಗ್ರಾಮದ ಮುರಾರ್ಜಿ ವಸತಿ ಶಾಲೆಯಲ್ಲಿ ಘಟನೆ

28112021 Kustagi students Sick
Published on

ಉಪಾಹಾರ ಸೇವಿಸಿದ ಬಳಿಕ ಅನಾರೋಗ್ಯ

ಕುಷ್ಟಗಿ: ತಾಲೂಕಿನ ನಿಡಶೇಸಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯ 20ಕ್ಕೂ ಹೆಚ್ಚು ಮಕ್ಕಳು ಭಾನುವಾರ ಬೆಳಗ್ಗೆ ಉಪಾಹಾರ ಸೇವಿಸಿದ ಬಳಿಕ ಅಸ್ವಸ್ಥಗೊಂಡು ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಸತಿ ನಿಲಯದಲ್ಲಿ ಬೆಳಗಿನ ಉಪಹಾರಕ್ಕೆಂದು ತಯಾರಿಸಲಾಗಿದ್ದ ಇಡ್ಲಿ ಸೇವಿಸಿದ ಬಳಿಕ ಕೆಲ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಇದನ್ನು ಕಂಡ ಅಡುಗೆ ಸಿಬ್ಬಂದಿ ಪಲಾವ್ ತಯಾರಿಸಿ ವಿದ್ಯಾರ್ಥಿಗಳಿಗೆ ನೀಡಿದ್ದಾರೆ. ಆದರೆ ವಿದ್ಯಾರ್ಥಿಗಲ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಆಹಾರದ ಮಾದರಿ ಸಂಗ್ರಹಿಸಿ ಪರಿಶೀಲಿಸಲಾಗುತ್ತಿದೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಕೆ.ಎಸ್.ರಡ್ಡಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net