ಪೌಷ್ಟಿಕ ಆಹಾರದ ಮಹತ್ವ ತಿಳಿಸಿ: ಸಿವಿಲ್ ನ್ಯಾಯಾಧೀಶೆ ಸರಸ್ವತಿ ದೇವಿ ಸಲಹೆ

010922 Kushtagi pooshan Abhiyan
Published on

ಕುಷ್ಟಗಿ: ಜನರು ಪೌಷ್ಟಿಕ ಆಹಾರದ ಮಹತ್ವ ಅರಿಯಬೇಕು ಎಂದು ಪಟ್ಟಣದ ಜೆಎಂಎಫ್‌ಸಿ ಹಿರಿಯ ಸಿವಿಲ್ ನ್ಯಾಯಾಧೀಶೆ ಸರಸ್ವತಿ ದೇವಿ ಹೇಳಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಹುತೇಕರು ಹೋಟೆಲ್ ಹಾಗೂ ಬೀದಿ ಬದಿ ತಯಾರಿಸುವ ತಿನಿಸುಗಳಿಗೆ ಮೊರೆ ಹೋಗುತ್ತಿದ್ದಾರೆ. ಇದು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಸಾಧ್ಯವಾದಷ್ಟು ಮನೆಯಲ್ಲಿ ತಯಾರಿಸಿದ ಪೌಷ್ಟಿಕ ಆಹಾರ ಸೇವಿಸಬೇಕು.

ಶೇ.40 ಮಕ್ಕಳು ಹಾಗೂ ಶೇ.50 ಮಹಿಳೆಯರು ಅಪೌಷ್ಟಿಕದಿಂದ ಬಳಲುತ್ತಿದ್ದಾರೆ. ಪೌಷ್ಟಿಕ ಆಹಾರ ಕುರಿತು ಗ್ರಾಮೀಣರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು. ವಕೀಲರ ಸಂಘದ ಅಧ್ಯಕ್ಷ ಎಂ.ಎಚ್.ಗೋಡಿ, ಸಿಡಿಪಿಒ ವಿರೂಪಾಕ್ಷ, ಚಳಗೇರಾ ಪಿಎಚ್‌ಸಿ ವೈದ್ಯಾಧಿಕಾರಿ ಶರಣಪ್ಪ ಮೂಲಿಮನಿ, ಹಿರಿಯ ಮೇಲ್ವಿಚಾರಕಿಯರಾದ ರೇಣುಕಾ ಅಸುಂಡಿ, ಮಂಜುಳಾ ಹಕ್ಕಿ, ಪೋಷಣ್ ಅಭಿಯಾನದ ಸಹಾಯಕ ಸಂಯೋಜಕ ಸುರೇಶ ಅಡಪಟ್ಟಿ, ಹಿರಿಯ ಆರೋಗ್ಯ ಮೇಲ್ವಿಚಾರಕ ಸೋಮಶೇಖರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net