ಜನರ ಸಂಕಷ್ಟಕ್ಕೆ ಪಕ್ಷಾತೀತ ಸ್ಪಂದನೆ ಅಗತ್ಯ- ಶಾಸಕ ಅಮರೇಗೌಡ ಬಯ್ಯಪುರ ಅಭಿಪ್ರಾಯ

Kushtagi MLA Free Food
ಕುಷ್ಟಗಿ ತಾಲೂಕು ಆಸ್ಪತ್ರೆಯಲ್ಲಿ ರೋಗಿಗಳಿಗೆ ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಶನಿವಾರ ಉಪಾಹಾರ ವಿತರಿಸಿದರು.
Published on

ಕುಷ್ಟಗಿ: ಕೋವಿಡ್ ಹಾಗೂ ಲಾಕ್‌ಡೌನ್‌ಗೆ ಸಂಬಂಧಿಸಿದಂತೆ ಜನರ ಸಂಕಷ್ಟಗಳಿಗೆ ಪಕ್ಷಾತೀತವಾಗಿ ಸ್ಪಂದಿಸಬೇಕಿದೆ ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಹೇಳಿದರು.

ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಶನಿವಾರ ರೋಗಿಗಳಿಗೆ ಉಪಾಹಾರ ವಿತರಿಸಿ ಮಾತನಾಡಿದರು. ಯುವ ಕಾಂಗ್ರೆಸ್ ವತಿಯಿಂದ ಮೂರು ದಿನಗಳಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ ಊಟ ಮತ್ತು ಉಪಹಾರದ ವ್ಯವಸ್ಥೆ ಮಾಡಲಾಗುತ್ತಿದೆ. ತಹಸಿಲ್ ಕಚೇರಿಗೆ ಬರುವ ಸಾರ್ವಜನಿಕರಿಗೂ ಊಟದ ವ್ಯವಸ್ಥೆ ಮಾಡುವಂತೆ ಕಾರ್ಯಕರ್ತರಿಗೆ ಸೂಚಿಸಲಾಗಿದೆ ಎಂದರು.

ತಾಲೂಕಿನ ಮೂಗನೂರು ಗ್ರಾಮಸ್ಥರೊಬ್ಬರಿಗೆ ಕರೊನಾ ಸೋಂಕು ದೃಢಪಟ್ಟಿತ್ತು. ಇದೀಗ ಅವರ ಕಣ್ಣುಗಳಲ್ಲಿ ಗುಳ್ಳೆಗಳು ಕಂಡುಬಂದಿರುವುದರಿಂದ ಬ್ಲಾೃಕ್ ಫಂಗಸ್ ಶಂಕೆ ಮೇಲೆ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ ಎಂದು ಶಾಸಕ ಬಯ್ಯಪುರ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net