

ಕುಷ್ಟಗಿ: ಇಲ್ಲಿನ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಬಸವರಾಜ ಹೊರಪ್ಯಾಟಿ ಹಾಗೂ ಲೆಕ್ಕಿಗ ಸುಧೀರಕುಮಾರ ಗೋನಾಳಮಠ ವಿರುದ್ಧ ಸ್ಥಳೀಯ ಠಾಣೆಯಲ್ಲಿ ಕ್ರಿಮಿನಲ್ ಕೇಸ್ ದಾಖಲಾಗಿದೆ. 2018-19ನೇ ಸಾಲಿನ ಲೆಕ್ಕ ಪರಿಶೋಧನಾ ವರದಿಯಲ್ಲಿ 89,79,721 ರೂ. ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಲಾಗಿತ್ತು. ಫೆ.13ರಂದು ನಡೆದ ಸಂಘದ ವಿಶೇಷ ಸಾಮಾನ್ಯ ಸಭೆಯಲ್ಲಿ ಇಬ್ಬರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವ ನಿರ್ಣಯ ಕೈಗೊಳ್ಳಲಾಗಿತ್ತು. ಸದ್ಯ ಸಂಘದ ಪ್ರಭಾರ ಕಾರ್ಯದರ್ಶಿ ವಿಜಯಕುಮಾರ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.