ಜನಜಾಗೃತಿ ಮೂಡಿಸಿದ್ದರಿಂದ ಏಡ್ಸ್ ರೋಗಿಗಳ ಸಂಖ್ಯೆ ಇಳಿಮುಖ: ಕುಷ್ಟಗಿ ಆಸ್ಪತ್ರೆ ವೈದ್ಯಾಧಿಕಾರಿ ಕೆ.ಎಸ್.ರಡ್ಡಿ ಮಾಹಿತಿ

011222 Kushtagi AIDS prevention awareness march
ಕುಷ್ಟಗಿಯಲ್ಲಿ ಏಡ್ಸ್ ತಡೆ ಜಾಗೃತಿ ಜಾಥಾಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶೆ ಸರಸ್ವತಿ ದೇವಿ ಚಾಲನೆ ನೀಡಿದರು.
Published on

ಕುಷ್ಟಗಿ: ಜನಜಾಗೃತಿ ಮೂಡಿಸಿದ ಪರಿಣಾಮ ಏಡ್ಸ್ ರೋಗಿಗಳ ಸಂಖ್ಯೆ ಇಳಿಮುಖದತ್ತ ಸಾಗಿದೆ ಎಂದು ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಕೆ.ಎಸ್.ರಡ್ಡಿ ಹೇಳಿದರು.

ಏಡ್ಸ್ ನಿಯಂತ್ರಣ ದಿನಾಚರಣೆ ನಿಮಿತ್ತ ಪಟ್ಟಣದಲ್ಲಿ ಗುರುವಾರ ಏರ್ಪಡಿಸಿದ್ದ ಜಾಗೃತಿ ಜಾಥಾದಲ್ಲಿ ಮಾತನಾಡಿದರು. ಈ ಹಿಂದೆ ತಾಲೂಕು ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿದಾಗ ಸಾವಿರಕ್ಕೆ ನೂರು ಜನರಲ್ಲಿ ಏಡ್ಸ್ ಸೋಂಕು ಪತ್ತೆಯಾಗುತ್ತಿತ್ತು. ರೋಗದ ಬಗ್ಗೆ ನಡೆದ ಸಂಶೋಧನೆಗಳು ಹಾಗೂ ಜನಜಾಗೃತಿ ಮೂಡಿಸಿದ ಪರಿಣಾಮ ಏಡ್ಸ್ ಸೋಂಕಿತರ ಸಂಖ್ಯೆ ತಗ್ಗಿದೆ. ಸದ್ಯ ಸಾವಿರಕ್ಕೆ 6 ಜನರಲ್ಲಿ ಸೋಂಕು ಕಂಡುಬರುತ್ತಿದೆ. ಏಡ್ಸ್‌ಗೆ ಯಾವುದೇ ಲಸಿಕೆ ಇಲ್ಲವಾಗಿರುವುದರಿಂದ ರೋಗ ಬರದಂತೆ ಮುಂಜಾಗ್ರತೆ ವಹಿಸಬೇಕು ಎಂದು ಸಲಹೆ ನೀಡಿದರು. ಹಿರಿಯ ಸಿವಿಲ್ ನ್ಯಾಯಾಧೀಶೆ ಸರಸ್ವತಿ ದೇವಿ, ಜಾಥಾಕ್ಕೆ ಚಾಲನೆ ನೀಡಿದರು. ಸರ್ಕಾರಿ ಸಹಾಯಕ ಅಭಿಯೋಜಕ ಎಲ್.ರಾಯನಗೌಡ, ತಾಲೂಕು ಆರೋಗ್ಯಾಧಿಕಾರಿ ಆನಂದ್ ಗೋಟೂರು, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಾಲಾಜಿ ಬಳಿಗಾರ, ವಕೀಲರ ಸಂಘದ ಅಧ್ಯಕ್ಷ ಎಂ.ಎಚ್.ಗೋಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net