ಕಾಮಗಾರಿಗಳ ಗುಣಮಟ್ಟಕ್ಕೆ ಆದ್ಯತೆ ನೀಡುವಂತೆ ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಸಲಹೆ

090322 Kushtagi MLA Bayiyapura Bhoomi Pooja
ಕುಷ್ಟಗಿ ತಾಲೂಕಿನ ಹಿರೇಮನ್ನಾಪುರದಲ್ಲಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಸಿಸಿ ರಸ್ತೆಗಳ ಕಾಮಗಾರಿಗೆ ಚಾಲನೆ ನೀಡಿದರು.
Published on

ಕುಷ್ಟಗಿ: ಕಾಮಗಾರಿಗಳ ಗುಣಮಟ್ಟಕ್ಕೆ ಆದ್ಯತೆ ನೀಡುವ ಕಾರ್ಯವನ್ನು ಅನುಷ್ಠಾನ ಇಲಾಖೆಯ ಅಧಿಕಾರಿಗಳು ಮಾಡಬೇಕು ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಹೇಳಿದರು. ತಾಲೂಕಿನ ಹಿರೇಮನ್ನಾಪುರದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಬುಧವಾರ ಮಾತನಾಡಿದರು.

ಗ್ರಾಮಗಳಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಿಪಡಿಸದೆ ಗುಣಮಟ್ಟದ ಕಾಮಗಾರಿ ನಡೆಯುವಂತೆ ಗ್ರಾಮಸ್ಥರು ಮೇಲ್ವಿಚಾರಣೆ ಮಾಡಬೇಕು. ಗ್ರಾಮದ ಮೂಲ ಸೌಕರ್ಯಕ್ಕೆ ಸಂಬಂಧಿಸಿದಂತೆ ವಾರ್ಡ್ ಸದಸ್ಯರು ಹಾಗೂ ಗ್ರಾಪಂ ಪಿಡಿಒಗಳ ಗಮನಕ್ಕೆ ತರಬೇಕು. ಆ ಮೂಲಕ ಸರ್ಕಾರದ ಅನುದಾನ ಸದುಪಯೋಗ ಮಾಡಿಕೊಳ್ಳಬೇಕು. 2020-21ನೇ ಸಾಲಿನ ಜಿಲ್ಲಾ ಖನಿಜ ಪ್ರತಿಷ್ಠಾನ ಯೋಜನೆಯ 50ಲಕ್ಷ ರೂ. ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯ 20ಲಕ್ಷ ರೂ.ಗಳ ಅನುದಾನದಲ್ಲಿ ಗ್ರಾಮದ ವಿವಿಧ ವಾರ್ಡ್‌ಗಳಲ್ಲಿ ಸಿಸಿ ರಸ್ತೆ ನಿರ್ಮಿಸಲಾಗುತ್ತಿದೆ ಎಂದರು.

ವಿಎಸ್‌ಎಸ್‌ಎನ್ ಅಧ್ಯಕ್ಷ ಮಂಜುನಾಥ ಪುರದ್, ಕಾರ್ಯನಿರ್ವಾಹಕ ಅಧಿಕಾರಿ ದೊಡ್ಡಬಸಯ್ಯ ಹಿರೇಮಠ, ಗ್ರಾಪಂ ಮಾಜಿ ಅಧ್ಯಕ್ಷರಾದ ಶಂಕ್ರಪ್ಪ ಕನ್ನಾಳ, ಹನುಮಂತ ಅಳ್ಳಳ್ಳಿ, ಪ್ರಮುಖರಾದ ಗುರುಬಸಯ್ಯ ಹಿರೇಮಠ, ಸೋಮನಗೌಡ ಪಾಟೀಲ್, ಇಮಾಮಸಾಬ್ ಗರಡಿಮನಿ, ರಂಜಾನಸಾಬ್ ಅಳ್ಳಳ್ಳಿ, ಮಂಜುನಾಥ ಕನ್ನಾಳ, ವೀರೇಶಪ್ಪ ಹಾಸಗಲ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net