ಕೈ ಪಾಳಯದಲ್ಲಿ ಗೆಲುವಿನ ಸಂಭ್ರಮ; ಜಿಲ್ಲೆಯ ವಿವಿಧೆಡೆ ವಿಜಯೋತ್ಸವ

14122021 Kustagi congress clebrete
Published on

ಕುಷ್ಟಗಿ: ರಾಯಚೂರು-ಕೊಪ್ಪಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಗೌಡ ಪಾಟೀಲ್ ಬಯ್ಯಾಪುರ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಹಾಗೂ ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಾಪುರ ಪರ ಜಯಘೋಷ ಕೂಗಿದರು. ಶಾಸಕ ಅಮರೇಗೌಡ ಬಯ್ಯಾಪುರ ನಿವಾಸದಲ್ಲಿ ಅವರ ಪತ್ನಿ ಶಶಿಕಲಾ ಬಯ್ಯಪುರ ಸಮೇತ ಮಹಿಳಾ ಘಟಕದ ಪದಾಧಿಕಾರಿಗಳು ಹಾಗೂ ಪಕ್ಷದ ಮುಖಂಡರು ಸಂಭ್ರಮ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net