

ಕುಷ್ಟಗಿ: ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವ ರಾಜ್ಯ ಸರ್ಕಾರ ಯೋಜನೆಗಳ ಲಾಭವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಕಲಬುರಗಿ ವಿಭಾಗದ ಉಪಾಧ್ಯಕ್ಷ ಎಸ್.ಆರ್.ಮೆಹರೋಜ್ ಖಾನ್ ಹೇಳಿದರು.
ತಾಪಂ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಮಹಿಳಾ ಸಬಲೀಕರಣ ಮತ್ತು ಯುವ ಸಮುದಾಯಗಳ ಸಬಲೀಕರಣಕ್ಕಾಗಿ ಸರ್ಕಾರ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಶೇ.97 ಫಲಾನುಭವಿಗಳು ಯೋಜನೆಗಳ ಲಾಭ ಪಡೆದುಕೊಂಡಿದ್ದಾರೆ. ಶೇಕಡ ನೂರು ಸಾಧನೆಗೆ ವಿಶೇಷ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಯೋಜನೆಯ ಲಾಭ ಪಡೆದು ಸ್ವಾವಲಂಬಿ ಜೀವನ ನಡೆಸುತ್ತಿರುವ ತಾಲೂಕಿನ ಆಯ್ದ ಫಲಾನುಭವಿಗಳನ್ನು ಗುರುತಿಸಿ ಮಹಿಳಾ ದಿನಾಚರಣೆಯಲ್ಲಿ ಕಲಬುರಗಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಪ್ರೋತ್ಸಾಹಿಸಲಾಗುವುದು ಎಂದರು.
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿ ಶಿವಯೋಗಿ, ಸಿಡಿಪಿಒ ಯಲ್ಲಮ್ಮ ಹಂಡಿ, ಆಹಾರ ಇಲಾಖೆಯ ಉಪನಿರ್ದೇಶಕ ಸೋಮಶೇಖರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಡ್ಡಿ ಶ್ರೀನಿವಾಸ, ಜಿಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ತಾಪಂ ಇಒ ಪಂಪಾಪತಿ ಹಿರೇಮಠ, ಸಾರಿಗೆ ಘಟಕ ವ್ಯವಸ್ಥಾಪಕ ಸುಂದರಗೌಡ, ತಾಲೂಕು ಅಧ್ಯಕ್ಷ ಫಾರೂಖ್ ಡಲಾಯತ್ ಸೇರಿ ಸದಸ್ಯರು ಇದ್ದರು.