ವಿದ್ಯಾರ್ಥಿಗಳಿಗಾಗಿ ಹೆಚ್ಚುವರಿ ಬಸ್ ಬಿಡಿ

Karave protest for bus
ಕುಷ್ಟಗಿ ತಾಲೂಕಿನ ಹೆಚ್ಚುವರಿ ಬಸ್ ಸೌಲಭ್ಯಕ್ಕಾಗಿ ಆಗ್ರಹಿಸಿ ಕರವೇ ಕಾರ್ಯಕರ್ತರು ಸಾರಿಗೆ ಘಟಕದ ನೌಕರಗೆ ಕುಂಟೆಪ್ಪಗೆ ಮನವಿ ಸಲ್ಲಿಸಿದರು. ಸಂಘಟನೆಯ ತಾಲೂಕು ಅಧ್ಯಕ್ಷ ಪ್ರಕಾಶ, ಪ್ರಧಾನ ಕಾರ್ಯದರ್ಶಿ ಮನೋಹರ ಬಡಿಗೇರ, ಉಪಾಧ್ಯಕ್ಷ ಚನ್ನಪ್ಪ ನಾಲಗಾರ್, ಪದಾಧಿಕಾರಿಗಳಾದ ಜಾವೇದ್ ಕಾಟೇವಾಡೆ, ಶರಣಪ್ಪ ನಿಡಗುಂದಿ ಇದ್ದರು.
Published on

ಕುಷ್ಟಗಿ: ತಾಲೂಕಿನ ವಿವಿಧ ಗ್ರಾಮಗಳ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಕರವೇ (ನಾರಾಯಣಗೌಡ ಬಣ) ಕಾರ್ಯಕರ್ತರು ಸಾರಿಗೆ ಘಟಕ ವ್ಯವಸ್ಥಾಪಕಗೆ ಬರೆದ ಪತ್ರವನ್ನು ಸಾರಿಗೆ ಸಿಬ್ಬಂದಿ ಕುಂಟೆಪ್ಪಗೆ ಸೋಮವಾರ ಸಲ್ಲಿಸಿದರು.

ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿ

ನಿತ್ಯ ಬಸ್‌ಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿರುವುದರಿಂದ ವಿದ್ಯಾರ್ಥಿಗಳಿಗೆ ಸ್ಥಳಾವಕಾಶ ಇಲ್ಲದಂತಾಗಿದೆ. ವಿದ್ಯಾರ್ಥಿನಿಯರು ಶಾಲೆಗೆ ತೆರಳಲಾಗದೆ ಮನೆಗೆ ಹಿಂತಿರುಗುತ್ತಿದ್ದಾರೆ. ಬಾಲಕರು ಜೋತು ಬಿದ್ದು ಪ್ರಯಾಣಿಸುವುದರಿಂದ ಅಪಘಾತ ಸಂಭವಿಸುವ ಸಾಧ್ಯತೆ ಇದೆ. ಶಕ್ತಿ ಯೋಜನೆಯ ಅನುಷ್ಠಾನದ ಜತೆಗೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಕರವೇ ಕಾರ್ಯಕರ್ತರು ಒತ್ತಾಯಿಸಿದರು.

ತಾಲೂಕು ಅಧ್ಯಕ್ಷ ಪ್ರಕಾಶ, ಪ್ರಧಾನ ಕಾರ್ಯದರ್ಶಿ ಮನೋಹರ ಬಡಿಗೇರ, ಉಪಾಧ್ಯಕ್ಷ ಚನ್ನಪ್ಪ ನಾಲಗಾರ್, ಪದಾಧಿಕಾರಿಗಳಾದ ಜಾವೇದ್ ಕಾಟೇವಾಡೆ, ಶರಣಪ್ಪ ನಿಡಗುಂದಿ, ಸೋಮಣ್ಣ ಯಲಬುರ್ತಿ, ಪರಸಪ್ಪ ಅಳ್ಳಳ್ಳಿ, ಮರಿಯಪ್ಪ ಮಾದರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net