ಸಿದ್ದರಾಮಯ್ಯಗೆ ಸ್ಪರ್ಧಿಸಲು ಕ್ಷೇತ್ರವೇ ಇಲ್ಲ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ

BY Vijayendra Visit Kushtagi
ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೋಮವಾರ ಕುಷ್ಟಗಿಗೆ ಭೇಟಿ.
Published on

ಕುಷ್ಟಗಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸ್ಪರ್ಧಿಸಲು ಕ್ಷೇತ್ರವೇ ಇಲ್ಲದಂತಾಗಿದೆ. ಕ್ಷೇತ್ರ ಸಿಕ್ಕು ಸ್ಪರ್ಧಿಸಿದರೂ ಗೆಲ್ಲುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಇಳಕಲ್‌ಗೆ ತೆರಳುತ್ತಿದ್ದ ಅವರು ಮಾರ್ಗ ಮಧ್ಯೆ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಿ ಸೋಮವಾರ ಮಾತನಾಡಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿ ಹಾಗೂ ಕುಷ್ಟಗಿ ಕ್ಷೇತ್ರದಲ್ಲಿ ಹಿನ್ನಡೆಯಾಗಿತ್ತು. ಈ ಬಾರಿ ಈ ರೀತಿಯಾಗುವುದಿಲ್ಲ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಯಾವ ಪಕ್ಷದಿಂದ ಬಂದಿದ್ದಾರೆ.

ಯಾವ ಪಕ್ಷದಲ್ಲಿದ್ದಾರೆ ಎಂಬ ಅರಿವಿಲ್ಲ. ವಿಧಾನ ಸಭೆ ಚುನಾವಣೆ ಎನ್ನುವಷ್ಟರಲ್ಲಿ ಯಾವ ಪಕ್ಷದಲ್ಲಿರುತ್ತಾರೆಂಬುದನ್ನೂ ಹೇಳಲಾಗುವುದಿಲ್ಲ. ಪಕ್ಷದ ಶಾಸಕರಾಗಲಿ ಮಾಜಿ ಶಾಸಕರಾಗಲಿ ಯಾವುದೇ ಕಾರಣಕ್ಕೂ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ್, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಶರಣು ತಳ್ಳೀಕೇರಿ, ಪುರಸಭೆ ಅಧ್ಯಕ್ಷ ಜಿ.ಕೆ.ಹಿರೇಮಠ, ಪ್ರಮುಖರಾದ ಮುತ್ತು ರಾಠೋಡ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net