

ಕುಷ್ಟಗಿ: ಕರೊನಾ ನೆಪವೊಡ್ಡಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆ ರದ್ದುಗೊಳಿಸುವುದು ಸರಿಯಲ್ಲ. ಪರೀಕ್ಷೆಗಳನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಒತ್ತಾಯಿಸಿದರು. ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಬೇಕು. ಕಳೆದ ವರ್ಷ ಪರೀಕ್ಷೆ ಯಶಸ್ವಿಯಾಗಿ ನಡೆಸಲಾಗಿದೆ. ಸರ್ಕಾರ ನಿರ್ದೇಶನ ನೀಡಿದರೆ ಅಧಿಕಾರಿಗಳು ಸೂಕ್ತ ತಯಾರಿ ಕೈಗೊಳ್ಳುತ್ತಾರೆ. ಪರೀಕ್ಷೆ ಆಯೋಜನೆಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಹತೆ ಹೊಂದಿರುವ ನೇಮಕಗಳಿಗೆ ಅನುಕೂಲವಾಗಲಿದೆ ಎಂದು ಪಟ್ಟಣದ ಸರ್ಕಿಟ್ ಹೌಸ್‌ನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ ತಿಳಿಸಿದರು.