ಗ್ಯಾರಂಟಿಗಳ ಲಾಭ ಎಲ್ಲರಿಗೂ ಸಿಗುವಂತಾಗಲಿ

sabhe
ಕುಷ್ಟಗಿ ತಾಪಂ ಸಭಾಂಗಣದಲ್ಲಿ ಬುಧವಾರ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರಡ್ಡಿ ಶ್ರೀನಿವಾಸ, ತಾಲೂಕು ಅಧ್ಯಕ್ಷ ಫಾರೂಕ್ ಡಲಾಯತ್, ತಾಪಂ ಇಒ ನಿಂಗಪ್ಪ ಮಸಳಿ ಇದ್ದರು.
Published on

ಕುಷ್ಟಗಿ: ರಾಜ್ಯ ಸರ್ಕಾರ ಜಾರಿ ಮಾಡಿರುವ ವಿವಿಧ ಗ್ಯಾರಂಟಿ ಯೋಜನೆಗಳು ಸಮರ್ಪಕ ರೀತಿಯಲ್ಲಿ ಅನುಷ್ಠಾನಗೊಳ್ಳುವಲ್ಲಿ ಅಧಿಕಾರಿಗಳ ಪಾತ್ರ ಪ್ರಮುಖವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರಡ್ಡಿ ಶ್ರೀನಿವಾಸ ಹೇಳಿದರು.

ಪಟ್ಟಣದ ತಾಪಂ ಸಭಾಗಣದಲ್ಲಿ ಬುಧವಾರ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು. ಯೋಜನೆಗಳ ಲಾಭ ಪ್ರತಿಯೊಬ್ಬರಿಗೆ ಸಿಗುವಂತಾಗಲಿ ಎಂಬ ಉದ್ದೇಶದಿಂದ ಅನುಷ್ಠಾನ ಸಮಿತಿ ರಚಿಸಲಾಗಿದೆ. ಯಾರೊಬ್ಬರೂ ಯೋಜನೆಗಳಿಂದ ವಂಚಿತರಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.

ತಾಲೂಕಿನ 729ಫಲಾನುಭವಿಗಳು ವಿವಿಧ ತಾಂತ್ರಿಕ ಕಾರಣಗಳಿಂದ ಗೃಹಲಕ್ಷ್ಮೀ ಯೋಜನೆಯಿಂದ ಹೊರ ಉಳಿದಿದ್ದಾರೆ. ಅಂತಹ ಫಲಾನುಭವಿಗಳ ಮಾಹಿತಿ ಅಂಗನವಾಡಿ ಕಾರ್ಯಕರ್ತೆಯರು ನೀಡಿದ್ದಾರೆ. ಹಂತ ಹಂತವಾಗಿ ಎಲ್ಲರಿಗೂ ಯೋಜನೆಯ ಲಾಭ ಸಿಗಲಿದೆ ಎಂದು ಸಿಡಿಪಿಒ ಯಲ್ಲಮ್ಮ ಹಂಡಿ ಮಾಹಿತಿ ನೀಡಿದರು.

ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಫಾರೂಕ್ ಡಲಾಯತ್, ತಾಪಂ ಇಒ ನಿಂಗಪ್ಪ ಮಸಳಿ ಇದ್ದರು. ಸಾರಿಗೆ ಘಟಕದ ವ್ಯವಸ್ಥಾಪಕ ಸುಂದರಗೌಡ, ಜೆಸ್ಕಾಂ ಉಪ ವಿಭಾಗದ ಎಇಇ ದಾವಲಸಾಬ್ ನದಾಫ್, ಅನುಷ್ಠಾನ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net