ಮತದಾನ ಪ್ರಮಾಣ ಹೆಚ್ಚಿಸಲು ಕೈಜೋಡಿಸಿ

JAGRUTHI
ಕುಷ್ಟಗಿ ತಾಲೂಕಿನ ಬಿಜಕಲ್‌ನಲ್ಲಿ ಗ್ರಾಮಸ್ಥರಿಗೆ ಇವಿಎಂ ಹಾಗೂ ವಿವಿ ಪ್ಯಾಟ್ ಕುರಿತು ತರಬೇತಿ ನೀಡಲಾಯಿತು. ಗ್ರಾಪಂ ಅಧ್ಯಕ್ಷ ಗೌಡಪ್ಪಗೌಡ ಕಂದಗಲ್, ಪಿಡಿಒ ಆನಂದರಾವ್ ಕುಲಕರ್ಣಿ, ಗ್ರಾಮ ಲೆಕ್ಕಾಧಿಕಾರಿ ಕವಿತಾ ಇದ್ದರು.
Published on

ಕುಷ್ಟಗಿ: ಅರ್ಹ ಮತದಾರರೆಲ್ಲರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಸಂವಿಧಾನ ನೀಡಿರುವ ಹಕ್ಕು ಚಲಾಯಿಸಬೇಕು ಎಂದು ಸ್ವೀಪ್ ಸಮಿತಿ ಸೆಕ್ಟರ್ ಆಫಿಸರ್ ತೌಫಿಕ್ ಹೇಳಿದರು.

ತಾಲೂಕಿನ ಬಿಜಕಲ್‌ನಲ್ಲಿ ಗ್ರಾಮಸ್ಥರಿಗಾಗಿ ಮಂಗಳವಾರ ಏರ್ಪಡಿಸಿದ್ದ ಇವಿಎಂ ಹಾಗೂ ವಿವಿ ಪ್ಯಾಟ್ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಚುನಾವಣೆಗಳಲ್ಲಿ ಯುವ ಮತದಾರರ ಪಾತ್ರ ಮುಖ್ಯವಾಗಿದೆ. ಎಲ್ಲರೂ ಮತದಾನ ಪ್ರಮಾಣ ಹೆಚ್ಚಿಸಲು ಕೈಜೋಡಿಸಬೇಕು. ಇವಿಎಂ ಹಾಗೂ ವಿವಿ ಪ್ಯಾಟ್ ಬಗ್ಗೆ ತಿಳಿದುಕೊಂಡು ಗೊಂದಲವಿಲ್ಲದೆ ಮತ ಚಲಾಯಿಸಬೇಕು ಎಂದರು.

ಪಿಡಿಒ ಆನಂದರಾವ್ ಕುಲಕರ್ಣಿ ಮಾತನಾಡಿ, 18ವರ್ಷ ಮೇಲ್ಪಟ್ಟ ಎಲ್ಲರೂ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಸಬೇಕು. ಈ ಸಂಬಂಧ ಸ್ವೀಪ್ ಸಮಿತಿ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net