ನಿತ್ಯ ಯೋಗ ಅಭ್ಯಾಸದಿಂದ ಆರೋಗ್ಯ ವೃದ್ಧಿ: ಪ್ರಗತಿಪರ ರೈತ ದೇವೇಂದ್ರಪ್ಪ ಬಳೂಟಗಿ ಅಭಿಮತ

030622 Kushtagi Special Yoga Day
ಕುಷ್ಟಗಿಯ ಬುತ್ತಿಬಸವೇಶ್ವರ ದೇವಸ್ಥಾನ ಆವರಣದಲ್ಲಿ ಶುಕ್ರವಾರ ಆರಂಭವಾದ ವಿಶೇಷ ಯೋಗ ಶಿಬಿರದಲ್ಲಿ ಪ್ರಗತಿಪರ ರೈತ ದೇವೇಂದ್ರಪ್ಪ ಬಳೂಟಗಿ ಹಾಗೂ ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಶಾರದಾ ಶೆಟ್ಟರ್ ಇತರರು ಪಾಲ್ಗೊಂಡಿದ್ದರು.
Published on

ಕುಷ್ಟಗಿ: ನಿತ್ಯ ಯೋಗ ಅಭ್ಯಾಸದಿಂದ ದೈಹಿಕ ಆರೋಗ್ಯದ ಜತೆಗೆ ಏಕಾಗ್ರತೆ ಹೆಚ್ಚುತ್ತದೆ ಎಂದು ಪ್ರಗತಿಪರ ರೈತ ದೇವೇಂದ್ರಪ್ಪ ಬಳೂಟಗಿ ಹೇಳಿದರು.

ಪತಂಜಲಿ ಯೋಗ ಸಮಿತಿ ಹಾಗೂ ಇನ್ನರ್ ವ್ಹೀಲ್ ಕ್ಲಬ್ ಸಹಯೋಗದೊಂದಿಗೆ ಪಟ್ಟಣದ ಬುತ್ತಿಬಸವೇಶ್ವರ ದೇವಸ್ಥಾನ ಆವರಣದಲ್ಲಿ ಆಯೋಜಿಸಿರುವ ವಿಶೇಷ ಯೋಗ ಶಿಬಿರಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ಪ್ರತಿದಿನ ಬೆಳಗ್ಗೆ ಯೋಗ ಮಾಡಿದರೆ ಲವಲವಿಕೆಯಿಂದ ಇರಲು ಸಾಧ್ಯ. ಕ್ರಿಯಾಶೀಲತೆ ಹೆಚ್ಚುತ್ತದೆ. ಯೋಗ ಶಿಬಿರಗಳಲ್ಲಿ ಪಾಲ್ಗೊಂಡು ದೈನಂದಿನ ಜೀವನದಲ್ಲಿ ಮುಂದುವರಿಸಬೇಕು ಎಂದು ಸಲಹೆ ನೀಡಿದರು. ಇನ್ನಿರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಶಾರದಾ ಶೆಟ್ಟರ್ ಮಾತನಾಡಿ, ಮಹಿಳೆಯರು ಯೋಗಾಭ್ಯಾಸ ಮೈಗೂಡಿಸಿಕೊಳ್ಳಬೇಕು. ಮನೆಯ ಎಲ್ಲ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಕಾರಣ ಉತ್ತಮ ಆರೋಗ್ಯಕ್ಕೆ ನಿಯಮಿತ ಯೋಗ ಮಾಡಲೇಬೇಕು ಎಂದರು. ಕಸಾಪ ತಾಲೂಕು ಅಧ್ಯಕ್ಷ ವೀರೇಶ ಬಂಗಾರಶೆಟ್ಟರ್ ಮಾತನಾಡಿ, ಶಿಬಿರ 10 ದಿನ ನಡೆಯಲಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಪತಂಜಲಿ ಯೋಗ ಸಮಿತಿ ಜಿಲ್ಲಾ ಪ್ರಭಾರ ಶರಣಪ್ಪ ಕಾರಟಗಿ ಶಿಬಿರ ನಡೆಸಿಕೊಟ್ಟರು. ಪ್ರಮುಖರಾದ ದುರುಗೇಶ, ನಾರಾಯಣ, ಲತಾ ಸ್ಥಾವರಮಠ, ಕುಸುಮಕ್ಕ, ಅಚಲಾರಾಮ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net