ವಿದ್ಯಾರ್ಥಿಗಳನ್ನು ಮಕ್ಕಳಂತೆ ಕಾಣಿ ಎಂದು ಅಡುಗೆ ತಯಾರಕರಿಗೆ ಅಕ್ಷರ ದಾಸೋಹ ಅಧಿಕಾರಿ ಕೆ.ಶರಣಪ್ಪ ಸಲಹೆ

16022020 Kustagi Worker Protest
Published on


ಕುಷ್ಟಗಿ: ಶಾಲೆಯ ಮಕ್ಕಳನ್ನು ಮನೆ ಮಕ್ಕಳಂತೆ ಭಾವಿಸಿದರೆ ಶುಚಿ ಹಾಗೂ ರುಚಿ ಇರುವ ಅಡುಗೆ ತಯಾರಾಗುತ್ತದೆ ಎಂದು ಅಕ್ಷರ ದಾಸೋಹ ಅಧಿಕಾರಿ ಕೆ.ಶರಣಪ್ಪ ಹೇಳಿದರು.

ಪಟ್ಟಣದ ಡಾ.ರಾಜಕುಮಾರ ಕಲ್ಯಾಣ ಮಂಟಪದಲ್ಲಿ ಅಕ್ಷರ ದಾಸೋಹ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ತಾಲೂಕಿನ ವಿವಿಧ ಶಾಲೆಗಳ ಬಿಸಿಯೂಟ ಸಿಬ್ಬಂದಿಗೆ ಆಯೋಜಿಸಿರುವ ತರಬೇತಿ ಕಾರ್ಯಾಗಾರದಲ್ಲಿ ಭಾನುವಾರ ಮಾತನಾಡಿದರು.

ಅನೇಕ ಶಾಲೆಗಳಲ್ಲಿ ಅಡುಗೆ ಸಿಬ್ಬಂದಿ ವಿರುದ್ಧ ದೂರು ಕೇಳಿಬರುತ್ತಿದೆ. ಆಹಾರ ಧಾನ್ಯ ಸ್ವಚ್ಛಗೊಳಿಸದೆ ಅಡುಗೆ ತಯಾರಿಸಲಾಗುತ್ತಿದೆ. ತಾಜಾ ತರಕಾರಿ ಬಳಸದೆ ಸಾಂಬರ್ ತಯಾರಿಸಲಾಗುತ್ತಿದೆ ಎಂದೆಲ್ಲ ಪಾಲಕರು ದೂರುತ್ತಿದ್ದಾರೆ. ಮಕ್ಕಳ ಆರೋಗ್ಯವನ್ನು ದೃಷ್ಟಯಲ್ಲಿಟ್ಟುಕೊಂಡು ಅಡುಗೆ ತಯಾರಿಸಬೇಕು. ಶಿಕ್ಷಕರು ಮೇಲ್ವಿಚಾರಣೆ ಮಾಡಬೇಕು ಎಂದು ಸಲಹೆ ನೀಡಿದರು.

ಪುರಸಭೆ ಸದಸ್ಯ ರಾಮಣ್ಣ ಬಿನ್ನಾಳ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಥಮಿಕ ಶಾಲಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಲಕ್ಕಲಕಟ್ಟಿ, ಅಗ್ನಿಶಾಮಕ ಠಾಣಾಧಿಕಾರಿ ರಾಜು ನರಸಪ್ಪ, ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕ ದೊಡ್ಡಪ್ಪ ಜ್ಯೋತಿ, ಶಿಕ್ಷಕರಾದ ಅಮರೇಗೌಡ ನಾಗೂರು, ಎಂ.ಎಂ.ಗೊಣ್ಣಾಗರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net