ಬಾಲ್ಯ ವಿವಾಹ ಬೆಳಕಿಗೆ ಬರುತ್ತಿರುವುದು ಆಘಾತಕಾರಿ

Child Marriage
ಕುಷ್ಟಗಿಯ ದೇವರಾಜ ಅರಸು ಭವನದಲ್ಲಿ ಬುಧವಾರ ಏರ್ಪಡಿಸಿದ್ದ ಬಾಲ್ಯವಿವಾಹ ಮುಕ್ತ ಭಾರತ ಅಭಿಯಾನಕ್ಕೆ ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ಎಲ್.ಪೂಜೇರಿ ಚಾಲನೆ ನೀಡಿದರು. ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮಹಾಂತೇಶ ಚೌಳಗಿ, ವಕೀಲರ ಸಂಘದ ಅಧ್ಯಕ್ಷ ಎಸ್.ಜಿ.ಪಾಟೀಲ್ ಇತರರಿದ್ದರು.
Published on

ಕುಷ್ಟಗಿ: ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವೆಂದು ಜಾಗೃತಿ ಮೂಡಿಸುತ್ತಿದ್ದರೂ ಪ್ರಕರಣಗಳು ಬೆಳಕಿಗೆ ಬರುತ್ತಿರುವುದು ಆಘಾತಕಾರಿ ಬೆಳವಣಿಗೆ ಎಂದು ಜೆಎಂಎಫ್‌ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ಎಲ್.ಪೂಜೇರಿ ಹೇಳಿದರು.

ಪಟ್ಟಣದ ದೇವರಾಜ ಅರಸು ಭವನದಲ್ಲಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಬಾಲ್ಯ ವಿವಾಹಮುಕ್ತ ಭಾರತ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಬಾಲ್ಯ ವಿವಾಹದಿಂದ ದಂಪತಿಗೆ ವಯಸ್ಸಿಗೆ ಮೀರಿದ ಜವಾಬ್ದಾರಿ ಹೇರಿದಂತಾಗುತ್ತದೆ. ಅಪ್ರಾಪ್ತ ವಯಸ್ಸಿನಲ್ಲಿ ಗರ್ಭಿಣಿಯಾದರೆ ಗರ್ಭಕೋಶ ಬೆಳವಣಿಗೆಯಾಗದೆ ಹೆರಿಗೆ ಸಮಯದಲ್ಲಿ ಸಾವು ಸಂಭವಿಸಬಹುದು. ಇದರಿಂದ ಶಿಶು, ತಾಯಿ ಮರಣ ಪ್ರಮಾಣ ಹೆಚ್ಚುತ್ತವೆ. ಈ ಕಾರಣಗಳಿಂದ ಬಾಲ್ಯ ವಿವಾಹ ನಿಷೇಧಿಸಲಾಗಿದ್ದು, ಇದಕ್ಕೆ ಪಾಲಕರು ಸ್ವಯಂ ಪ್ರೇರಣೆಯಿಂದ ಕೈಜೋಡಿಸಬೇಕಿದೆ ಎಂದರು.

ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮಹಾಂತೇಶ ಚೌಳಗಿ, ಸಿಡಿಪಿಒ ಕಚೇರಿ ಮೇಲ್ವಿಚಾರಕಿ ಜ್ಯೋತಿ ಕುಂಬಾರ, ವಕೀಲರ ಸಂಘದ ಅಧ್ಯಕ್ಷ ಎಸ್.ಜಿ.ಪಾಟೀಲ್, ಸರ್ಕಾರಿ ಸಹಾಯಕ ಅಭಿಯೋಜಕ ಎಲ್.ರಾಯನಗೌಡ, ಅಪರ ಸರ್ಕಾರಿ ವಕೀಲ ಪರಸಪ್ಪ ಗುಜಮಾಗಡಿ, ಸಿಆರ್‌ಪಿ ದಂಡಪ್ಪ ಹೊಸಮನಿ, ಅಂಗನವಾಡಿ ಮೇಲ್ವಿಚಾರಕಿ ನಾಗಮ್ಮ ಗುಂಡೂರು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net