

ಕುಷ್ಟಗಿ: ದೇಶದ ಐಕ್ಯತೆಗೆ ಜಾತಿ, ಧರ್ಮ ಮರೆತು ಎಲ್ಲರೂ ಒಗ್ಗೂಡಬೇಕಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಹೇಳಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಸ್ವಾತಂತ್ರ್ಯದ ಹೆಸರಿನಲ್ಲಿ ಸ್ವೇಚ್ಛಾಚಾರ, ಎಲ್ಲೆಂದರಲ್ಲಿ ಅಹಿತಕರ ಘಟನೆ ನಡೆಯುತ್ತಿವೆ. ಜಾತಿ, ಧರ್ಮದ ವಿಷ ಬೀಜ ಬಿತ್ತಲಾಗುತ್ತಿದೆ. ಇದರಿಂದ ದೇಶದ ಐಕ್ಯತೆಗೆ ಧಕ್ಕೆ ಉಂಟಾಗಲಿದೆ.
ಕಾಶ್ಮೀರದಲ್ಲಿ ಕ್ರೌರ್ಯ ಮೆರೆದ ಭಯೋತ್ಪಾದಕರ ಕೃತ್ಯಕ್ಕೆ ರೋಷ ಉಕ್ಕಿ ಬರುತ್ತದೆ. ಭಾರತೀಯರೆಲ್ಲ ಒಂದೇ ಎಂಬ ಭಾವನೆಯಿಂದ ಮಾತ್ರ ಶಾಂತಿ ನೆಲೆಸಲು ಸಾಧ್ಯ ಎಂದರು. ತಹಸೀಲ್ದಾರ್ ಅಶೋಕ ಶಿಗ್ಗಾವಿ ಧ್ವಜಾರೋಹಣ ನೆರವೇರಿಸಿದರು.
ತಾಪಂ ಇಒ ಪಂಪಾಪತಿ ಹಿರೇಮಠ, ಸಿಪಿಐ ಯಶವಂತ ಬಿಸನಳ್ಳಿ, ಪ್ರಭಾರ ಬಿಇಒ ಎಂ.ಜಗದೀಶಪ್ಪ, ಸಿಡಿಪಿಒ ಯಲ್ಲಮ್ಮ ಹಂಡಿ, ಪುರಸಭೆ ಅಧ್ಯಕ್ಷ ಮಹಾಂತೇಶ ಕಲಬಾವಿ, ಸದಸ್ಯ ಜೆ.ಜಿ.ಆಚಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ನಿಂಗಪ್ಪ ಗುನ್ನಾಳ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಎಸ್.ವಿ.ಡಾಣಿ ಇತರರಿದ್ದರು.