

ಕುಷ್ಟಗಿಯಲ್ಲಿ 28 ಸೆಂಟರ್‌ಗಳು, 4538 ವಿದ್ಯಾರ್ಥಿಗಳು
ಕುಷ್ಟಗಿ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ತಾಲೂಕಿನಲ್ಲಿ ಕೋವಿಡ್ ಮುಂಜಾಗ್ರತೆಯೊಂದಿಗೆ ಸಕಲ ತಯಾರಿ ಕೈಗೊಳ್ಳಲಾಗಿದೆ.
ತಾಲೂಕಿನಲ್ಲಿ ಈ ಮೊದಲು 10ರಿಂದ 12 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುತ್ತಿತ್ತು. ಪರಸ್ಪರ ಅಂತರ ಕಾಯ್ದುಕೊಳ್ಳುವ ಸಲುವಾಗಿ ಈ ಬಾರಿ 28 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಎಲ್ಲ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ಪ್ರತಿ ಕೊಠಡಿಗೆ 12 ರಂತೆ 4538ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಶಾಲಾವಾರು ವಿದ್ಯಾರ್ಥಿಗಳು ಆಯಾ ಗ್ರಾಮದ ಶಾಲೆಯಲ್ಲಿಯೇ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಆಶಾ, ಆರೋಗ್ಯ ಕಾರ್ಯಕರ್ತರು ಸೇರಿದಂತೆ 738 ಸಿಬ್ಬಂದಿಯನ್ನು ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಲಾಗಿದೆ. ಎಲ್ಲ ಸಿಬ್ಬಂದಿ ಈಗಾಗಲೇ ಲಸಿಕೆ ಪಡೆದಿದ್ದಾರೆ.
ವಿದ್ಯಾರ್ಥಿಗಳಿಗೆ ಶಾಸಕರು, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಮಾಸ್ಕ್ ವಿತರಿಸಲಾಗಿದೆ. ಪರೀಕ್ಷಾ ಮಂಡಳಿಯಿಂದ ಸ್ಯಾನಿಟೈಸರ್ ನೀಡಲಾಗಿದೆ. ಎಲ್ಲ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಿ ಕೊಠಡಿಗೆ ಕಳುಹಿಸಲಾಗುವುದು. ವಿದ್ಯಾರ್ಥಿಗಳು ಹಾಗೂ ಪಾಲಕರು ಆತಂಕ ಪಡುವ ಅಗತ್ಯವಿಲ್ಲ.| ಎಂ.ಚನ್ನಬಸಪ್ಪ, ಕುಷ್ಟಗಿ ಬಿಇಒ