ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ

13122021 Kustagi student bycut
Published on


ಕುಷ್ಟಗಿ: ಪಟ್ಟಣದ ಸರ್ಕಾರಿ ಪ್ರಥಮ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಸೋಮವಾರ ಪ್ರತಿಭಟನೆ ನಡೆಸಿದರು. ಅತಿಥಿ ಉಪನ್ಯಾಸಕರ ಅನಿರ್ಧಿಷ್ಟಾವಧಿ ಧರಣಿ ಹಿನ್ನೆಲೆಯಲ್ಲಿ ತರಗತಿ ನಡೆಯದೆ ಮನೆಗೆ ತೆರಳಬೇಕಾಗಿರುವುದರಿಂದ ವಿದ್ಯಾರ್ಥಿಗಳು ಬೇಸತ್ತಿದ್ದಾರೆ.

ಕಾಲೇಜು ಆವರಣದಲ್ಲಿ ಜಮಾವಣೆಗೊಂಡ ವಿದ್ಯಾರ್ಥಿಗಳು ಉಪನ್ಯಾಸಕರನ್ನು ನೇಮಕ ಮಾಡುವಂತೆ ಘೋಷಣೆ ಕೂಗಿದರು. ಇದೇ ರೀತಿ ಮುಂದುವರಿದರೆ ಕಾಲೇಜಿಗೆ ಬರುವುದನ್ನೇ ನಿಲ್ಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಕಾಲೇಜಿನ ಕಾಯಂ ಉಪನ್ಯಾಸಕರು ಪ್ರಯಾಸ ಪಡುವಂತಾಯಿತು.

ಕಾಲೇಜಿನಲ್ಲಿ ಬೆರಳೆಣಿಕೆ ಕಾಯಂ ಉಪನ್ಯಾಸಕರಿದ್ದು, 1700ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬೋಧಿಸುವುದಿರಲಿ ನಿಭಾಯಿಸುವುದೂ ಕಷ್ಟವಾಗುತ್ತಿದೆ. ಮುಂದಿನ ತಿಂಗಳು ಪರೀಕ್ಷೆಗಳು ನಡೆಯಲಿದ್ದು, ಕೂಡಲೇ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಬೇಕು ಎಂದು ಎಸ್‌ಎಫ್‌ಐ ತಾಲೂಕು ಸಂಚಾಲಕ ಬಸವರಾಜ ಸಾರಥಿ ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net