ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ ಮದ್ದಾನೇಶ್ವರ ಮಠದ ಶ್ರೀ ಕರಿಬಸವ ಸ್ವಾಮೀಜಿ

05012022 Kustagi gust lutuchers protest
Published on

ಕುಷ್ಟಗಿ: ಸೇವೆ ಕಾಯಂಗೊಳಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಟ್ಟಣದ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಬುಧವಾರ ಪ್ರತಿಭಟನೆ ನಡೆಸಿದರು.

ಹಿರಿತನದ ಆಧಾರದ ಮೇಲೆ ಸೇವೆಯನ್ನು ಕಾಯಂಗೊಳಿಸಬೇಕು. ಮಾಸಿಕ ವೇತನವನ್ನು ಹೆಚ್ಚಿಸಬೇಕು. ಜೀವನ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.

ಮಲ್ಲಯ್ಯ ವೃತ್ತದಿಂದ ಮೆರವಣಿಗೆ ಹೊರಟ ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಪಟ್ಟಣದ ಮದ್ದಾನೇಶ್ವರ ಮಠದ ಶ್ರೀ ಕರಿಬಸವ ಶಿವಾಚಾರ್ಯ ಸ್ವಾಮೀಜಿ ಬೆಂಬಲ ಸೂಚಿಸಿದರು. ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಈಡೇರಿಸಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಹಿತ ಕಾಯಬೇಕಿದೆ ಎಂದರು.

ಪ್ರತಿಭಟನೆಯಲ್ಲಿ ಕುಷ್ಟಗಿ, ತಾವರಗೇರಾ ಹಾಗೂ ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net