

ಉಡುಪಿ: ಆಯುರ್ವೇದವು ವಿಶ್ವಮನ್ನಣೆಯನ್ನು ಗಳಿಸುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿಶೇಷವಾಗಿ ಆಯುರ್ವೇದದ ಅಧ್ಯಯನ ಹಾಗೂ ಸಂಶೋಧನೆಯಲ್ಲಿ ತೊಡಗಿಕೊಳ್ಳುವಂತೆ ಹಾಸನ ಎಸ್.ಡಿ.ಎಂ. ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಸನ್ನ ಎನ್. ರಾವ್ ಕರೆ ನೀಡಿದರು.
ಗುರುವಾರ ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದ 24ನೇ ವಾರ್ಷಿಕೋತ್ಸವ ಮತ್ತು ಶಿಷ್ಯೋಪನಯನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ಮಮತಾ ಕೆ.ವಿ., ದೀಕ್ಷಾ ಬದ್ಧರಾದ ವಿದ್ಯಾರ್ಥಿಗಳು ಕಾಲೇಜಿನ ಎಲ್ಲಾ ಸೌಕರ್ಯಗಳ ಸದುಪಯೋಗವನ್ನು ಪಡೆದುಕೊಂಡು ಉತ್ತಮ ವೈದ್ಯರಾಗುವ ತಮ್ಮ ಕನಸನ್ನು ನನಸಾಗಿಸಲು ಪ್ರಯತ್ನಿಸಬೇಕು ಎಂದು ಹೇಳಿದರು. ಹಾಸನ ಎಸ್.ಡಿ.ಎಮ್. ಆಯುರ್ವೇದ ಕಾಲೇಜಿನ ಉಪಪ್ರಾಂಶುಪಾಲೆ ಡಾ. ಶೈಲಜಾ ಯು. ವೈದ್ಯಕೀಯ ಅಧೀಕ್ಷಕ ಡಾ. ನಾಗರಾಜ್ ಎಸ್. ಉಪಸ್ಥಿತರಿದ್ದರು.
ಶೈಕ್ಷಣಿಕ ವಿಭಾಗದ ಮುಖ್ಯಸ್ಥೆ ಡಾ. ಶ್ರೀಲತಾ ಕಾಮತ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ಬೋಧನೆ ನೆರವೇರಿಸಿದರು. ಆಡಳಿತ ವಿಭಾಗದ ಮುಖ್ಯಸ್ಥ ಡಾ. ವೀರಕುಮಾರ ಕೆ. ವಾರ್ಷಿಕ ವರದಿ ವಾಚಿಸಿದರು. ಸ್ನಾತಕ ವಿಭಾಗದ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಜನೀಶ್ ವಿ. ಗಿರಿ ಹಾಗೂ ಸ್ನಾತಕೋತ್ತರ ಹಾಗೂ ಪಿಎಚ್.ಡಿ ಅಧ್ಯಯನ ಕೇಂದ್ರದ ಮುಖ್ಯಸ್ಥ ಡಾ. ಅಶೋಕ್ ಕುಮಾರ್ ಬಿ.ಎನ್. ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಶಸ್ತಿಗಳನ್ನು ಪಡೆದ ವಿದ್ಯಾರ್ಥಿಗಳನ್ನು ಪರಿಚಯಿಸಿದರು. ಆಟೋಟ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಶರೀರ ಕ್ರಿಯಾ ವಿಭಾಗದ ಮುಖ್ಯಸ್ಥರಾದ ಡಾ. ಎಸ್.ಆರ್. ಮೊಹರೆರ್ ಮತ್ತು ದ್ರವ್ಯಗುಣ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಪೂರ್ಣಿಮಾ ಎ. ಪರಿಚಯಿಸಿದರು.
ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶ್ರೀನಿಧಿ ಎಸ್. ಶೆಟ್ಟಿ ವಿದ್ಯಾರ್ಥಿ ಸಂಘದ ವರದಿ ವಾಚಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿನಾಯಕ ಜೋಯಿಸ್ ವಂದಿಸಿದರು. ಸಂಹಿತಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಮಹಾಲಕ್ಷ್ಮಿ ಎಂ.ಎಸ್. ಹಾಗೂ ಅಗದತಂತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಶುಭ ಪಿ.ಯು ಕಾರ್ಯಕ್ರಮ ನಿರೂಪಿಸಿದರು. ಸಹಪ್ರಾಧ್ಯಾಪ ಡಾ. ವಿಜಯೇಂದ್ರ ಭಟ್, ಡಾ. ಲಿಖಿತಾ ಡಿ.ಎನ್. ಮತ್ತು ಡಾ. ಅರುಣ್ ಕುಮಾರ್ ಕಾರ್ಯಕ್ರಮ ಸಂಯೋಜಿಸಿದ್ದರು.