ಪ್ರೊ. ಅಗ್ರಹಾರ ಕೃಷ್ಣಮೂರ್ತಿ ಸೇರಿ ಮೂವರಿಗೆ ಕುವೆಂಪು ಪ್ರಶಸ್ತಿ

Vijayavani-Featured-Image
Published on

ಬೆಂಗಳೂರು: ಕನ್ನಡ ಸಂಘರ್ಷ ಸಮಿತಿ ಕೊಡಮಾಡುವ ‘ಕುವೆಂಪು ಚಿರಂತನ ಪ್ರಶಸ್ತಿ’ಗೆ ಕವಿ, ಬರಹಗಾರ ಪ್ರೊ. ಅಗ್ರಹಾರ ಕೃಷ್ಣಮೂರ್ತಿ, ‘ಕುವೆಂಪು ಅನಿಕೇತನ ಪ್ರಶಸ್ತಿ’ಗೆ ಸಾಮಾಜಿಕ ಹೋರಾಟಗಾರ ಡಾ. ವಡ್ಡಗೆರೆ ನಾಗರಾಜಯ್ಯ ಹಾಗೂ ‘ಕುವೆಂಪು ಯುವಕವಿ ಪ್ರಶಸ್ತಿ’ಗೆ ಕವಯತ್ರಿ ಮಂಜುಳಾ ಹುಲಿಕುಂಟೆ ಆಯ್ಕೆಯಾಗಿದ್ದಾರೆ.

ಈ ತಿಂಗಳ 31ರಂದು ಸಂಜೆ 5 ಗಂಟೆಗೆ ನಗರದ ನರಸಿಂಹರಾಜ ಕಾಲೋನಿಯಲ್ಲಿರುವ ಬಿಎಂಶ್ರೀ ಕಲಾಭವನದಲ್ಲಿ ಸಮಿತಿ ಆಯೋಜಿಸಿರುವ ಕುವೆಂಪು ಹಾಗೂ ಬೇಂದ್ರೆ ಜನ್ಮದಿನದ ಕಾರ್ಯಕ್ರಮದಲ್ಲಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಅವರು ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಹೋರಾಟಗಾರ ರಾಮಣ್ಣ ಎಚ್. ಕೋಡಿಹೊಸಹಳ್ಳಿ ವಹಿಸಲಿದ್ದಾರೆ. ಪ್ರಾಧ್ಯಾಪಕ ಡಾ. ಕಾ.ವೆಂ. ಶ್ರೀನಿವಾಸಮೂರ್ತಿ ಉಪನ್ಯಾಸ ನೀಡಲಿದ್ದಾರೆ ಎಂದು ಸಮಿತಿಯ ಅಧ್ಯಕ್ಷ ಎ.ನಾಗರಾಜಸ್ವಾಮಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net