119ನೇ ರಾಷ್ಟ್ರಕವಿ ಕುವೆಂಪು ಜಯಂತಿ; ರಾಷ್ಟ್ರಕವಿ ಕುವೆಂಪು ಪ್ರಶಸ್ತಿ ಪ್ರದಾನ

Kuvempu Award
Published on

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರ 119ನೇ ಜಯಂತಿ ಅಂಗವಾಗಿ ಕುವೆಂಪು ಕಲಾನಿಕೇತನ ಸಂಸ್ಥೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕ ಸೇವಾ ಆಯೋಗದ ಮಾಜಿ ಸದಸ್ಯ ಡಾ. ಎಚ್​. ರವಿಕುಮಾರ್​ ಅವರಿಗೆ 'ಕುವೆಂಪು ಕರ್ನಾಟಕ ರತ್ನ ಪ್ರಶಸ್ತಿ' ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಮಲ್ಲಿಕಾ .ಎಸ್​ ಘಂಟಿ ಅವರಿಗೆ 'ರಾಷ್ಟ್ರಕವಿ ಕುವೆಂಪು' ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ವೇಳೆ ಕನ್ನಡ ಮತ್ತು ಸಂಸತಿ ಇಲಾಖೆ ಸಚಿವ ಶಿವರಾಜ್​ ಎಸ್​ ತಂಗಡಗಿ, ಮಂಜುಳಾ ಮಾನಸ, ನಟಿ ಅಭಿನಯ, ಕವಿ ಕೆ.ಚಿದಾನಂದಗೌಡ, ವಿಶ್ವಮಾನವ ರಾಷ್ಟ್ರಕವಿ ಕುವೆಂಪು ಕಲಾನಿಕೇತನ ಅಧ್ಯಕ್ಷ ಕುವೆಂಪು ಪ್ರಕಾಶ್, ಗಾಂಧಿ ಭವನ ಅಧ್ಯಕ್ಷ ನಾಡೋಜ ಡಾ. ವೂಡೇ ಪಿ. ಕೃಷ್ಣ​ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net