ಕುವೆಂಪು ಶಿಕ್ಷಣ ಚೇತನ ಪ್ರಶಸ್ತಿಗೆ ಲೋಕೇಶ್ ಬೆಕ್ಕಳಲೆ ಆಯ್ಕೆ: ನ.18ರಂದು ಮೈಸೂರಿನಲ್ಲಿ ಪ್ರದಾನ

Kuvempu Education Award
Published on

ಮಂಡ್ಯ: ತಾಲೂಕು ಬಸರಾಳು ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಲೋಕೇಶ್ ಬೆಕ್ಕಳಲೆ ಅವರು ಮೈಸೂರಿನ ಅದಮ್ಯ ರಂಗಶಾಲೆಯ ವತಿಯಿಂದ ನೀಡಲಾಗುವ ರಾಜ್ಯಮಟ್ಟದ ’ಕುವೆಂಪು ಶಿಕ್ಷಣ ಚೇತನ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

ಮದ್ದೂರು ತಾಲೂಕು ಬೆಕ್ಕಳಲೆ ಗ್ರಾಮದ ಲೋಕೇಶ್ ಮೈಸೂರು ವಿಶ್ವವಿದ್ಯಾನಿಲಯದಿಂದ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದು ಉಪನ್ಯಾಸಕರಾಗಿ ಕಾರ್ಯನಿವರ್ಹಿಸುತ್ತಿದ್ದಾರೆ. ಅಂತೆಯೇ ಪದವಿ ಪೂರ್ವ ಕಾಲೇಜು ಕನ್ನಡ ಉಪನ್ಯಾಸಕರ ವೇದಿಕೆ ಅಧ್ಯಕ್ಷರಾಗಿ ತೊಡಗಿಸಿಕೊಂಡಿದ್ದಾರೆ. ಗದ್ಯ ಪ್ರಕಾರದ ಲೇಖಕರಾಗಿ ಸಾಹಿತ್ಯ, ಕಲೆ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಸುಮಾರು 25 ಲೇಖನಗಳು ಪ್ರಕಟವಾಗಿವೆ.

ನ.18ರಂದು ಸಂಜೆ 5.30ಕ್ಕೆ ಮೈಸೂರಿನ ಜಯಲಕ್ಷ್ಮೀಪುರಂನ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿರುವ ಮಕ್ಕಳ ನಾಟಕ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ (ಸಿಪಿಕೆ) ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆಂದು ರಂಗಶಾಲೆಯ ಗೌರವ ಕಾರ್ಯದರ್ಶಿ ಟಿ.ಸತೀಶ್ ಜವರೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net