

ವಿಜಯವಾಣಿ ಸುದ್ದಿಜಾಲ ಕಲಬುರಗಿ
ವಿಶ್ವ ಮಾನವ ಕುವೆಂಪು ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಲು ವ್ಯವಸ್ಥೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಿಸೆಂಬರ್ ೨೯ರಂದು ಡಾ.ಎಸ್.ಎಂ.ಪAಡಿತ್ ರಂಗಮAದಿರದಲ್ಲಿ ಬೆಳಗ್ಗೆ ೧೧ಕ್ಕೆ ನಡೆಯುವ ಕಾರ್ಯಕ್ರಮಕ್ಕೆ ಅಧಿಕಾರಿಗಳು ತಪ್ಪದೇ ಹಾಜರಾಗಬೇಕು. ಸಾರ್ವಜನಿಕರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.
ಸರ್ಕಾರಿ, ಅರೆಸರ್ಕಾರಿ ಕಚೇರಿಗಳಲ್ಲಿ ಬೆಳಗ್ಗೆ ೯ಕ್ಕೆ ಜಯಂತಿ ಆಚರಿಸಬೇಕು. ಸರ್ಕಾರಿ ಶಾಲಾ, ಕಾಲೇಜು ಹಾಗೂ ಅನುದಾನ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಆಚರಿಸಬೇಕು ಎಂದರು.
ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಕರೆ ತರುವ ವ್ಯವಸ್ಥೆ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಪನಿರ್ದೇಶಕರು ಮಾಡಬೇಕು. ಕುವೆಂಪು ಜೀವನ ಕುರಿತು ಉಪನ್ಯಾಸ, ಪ್ರಬಂಧ ಬರೆಯುವುದಕ್ಕೆ ಅವಕಾಶ ಮಾಡಿಕೊಡಬೇಕು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಮಾತನಾಡಿ, ನಾಡಗೀತೆ ಸಂಗೀತ ಕಾರ್ಯಕ್ರಮದ ವ್ಯವಸ್ಥೆ ಹಾಗೂ ಆಮಂತ್ರಣ ಪತ್ರಿಕೆ ಮುದ್ರಿಸಲಾಗುವುದು ಎಂದರು.
ಕನ್ನಡ ಮತ್ತು ಅಭಿವೃದ್ಧಿ ಪ್ರಾಧಿಕಾರ ಮಾಜಿ ಸದಸ್ಯ ಸುರೇಶ ಬಡಿಗೇರ, ಕಲಬುರಗಿ ಸೇಂಟ್ ಜೋಸೆಫ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಚಿ.ಸಿ.ಲಿಂಗಣ್ಣ, ನಗರಾಭಿವೃದ್ಧಿ ಪ್ರಾಧಿಕಾರ ಲೆಕ್ಕ ಅಧೀಕ್ಷಕ ಅನಿಲ ರಾಠೋಡ್, ಆರೋಗ್ಯ ಇಲಾಖೆಯ ವಿಜಯಕುಮಾರ ಪವಾರ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರಾಜಶೇಖರ ಗೋನಾಯಕ್, ಶಿವರಾಜ ಅಂಡಗಿ, ಚಂದ್ರಕಾAತ ಸೂರನ್ ಇತರರಿದ್ದರು.