ಸಾ.ರಾ. ಗೋವಿಂದು, ಪ್ರವೀಣ್ ಶೆಟ್ಟಿಗೆ ಕುವೆಂಪು ಪ್ರಶಸ್ತಿ

New Project (2)
Published on

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ವತಿಯಿಂದ ನೀಡಲಾಗುವ 2023ನೇ ಸಾಲಿನ ‘ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿ’ಗೆ ಅಖಿಲ ಕರ್ನಾಟಕ ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ. ಗೋವಿಂದು ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ರಾಜ್ಯಮಟ್ಟದಲ್ಲಿ ಕನ್ನಡ ನಾಡು, ನುಡಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ಈ ಪ್ರಶಸ್ತಿ ನೀಡಬೇಕೆಂಬುದು ದತ್ತಿ ಆಶಯವಾಗಿದೆ. ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಸಮಿತಿ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ ಎಂದು ಪರಿಷತ್ತು ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net