ಒಂದು ವಾರ ಕುವೆಂಪು ವಿವಿ ಬಂದ್

16 smg 8
Published on

ಶಿವಮೊಗ್ಗ: ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಲ್ಲಿ ಕರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್‌ನ್ನು ಒಂದು ವಾರ ಬಂದ್ ಮಾಡಲು ವಿವಿ ಆಡಳಿತ ಮಂಡಳಿ ನಿರ್ಧರಿಸಿದೆ.

ಕುವೆಂಪು ವಿವಿಯ ಐವರು ಸಿಬ್ಬಂದಿಗೆ ಕರೊನಾ ಸೋಂಕು ತಗುಲಿತ್ತು. ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 70 ಮಂದಿಯ ಸ್ಯಾಂಪಲ್ ಸಂಗ್ರಹಿಸಿದ್ದು ಶನಿವಾರ 20 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿತ್ತು. ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕ್ಯಾಂಪಸ್‌ನಲ್ಲಿ ಸೋಂಕು ಹರಡದಂತೆ ತಡೆಯಲು ತರಗತಿಗಳನ್ನು ನಡೆಸದಿರಲು ನಿರ್ಧರಿಸಲಾಗಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಶೈಕ್ಷಣಿಕ ವಿಭಾಗದ ಕುಲಸಚಿವರು, ಜ.17ರಿಂದ 21ರವರೆಗೆ ಸ್ನಾತಕೋತ್ತರ ತರಗತಿಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಕ್ಯಾಂಪಸ್‌ನಲ್ಲಿ ಸ್ಯಾನಿಟೈಸ್: ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾನುವಾರ ಆಡಳಿತ ಭವನ, ತರಗತಿಗಳು, ಹಾಸ್ಟೆಲ್ ಸೇರಿದಂತೆ ವಿವಿ ಕ್ಯಾಂಪಸನ್ನು ಸ್ಯಾನಿಟೈಸ್ ಮಾಡಲಾಯಿತು. ಜ.22 ಮತ್ತು 23ರಂದು ವೀಕೆಂಡ್ ಕರ್ಫ್ಯೂ ಇರಲಿದೆ. ಹಾಗಾಗಿ ಒಂದು ವಾರ ವಿದ್ಯಾರ್ಥಿಗಳಿಗೆ ರಜೆ ಸಿಕ್ಕಂತಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net