ಕನ್ನಡದ ಏಳಿಗೆ ಶ್ರಮಿಸಿದ ಕುವೆಂಪು

9
Published on

ಮೈಸೂರು: ರಾಷ್ಟ್ರಕವಿ ಕುವೆಂಪು ಅವರು ತಮ್ಮ ಸಾಹಿತ್ಯ ಮೂಲಕ ಕನ್ನಡದ ಏಳಿಗೆ ಶ್ರಮಿಸಿದ್ದಾರೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಯಶಸ್ವಿ ಸೋಮಶೇಖರ್ ತಿಳಿಸಿದರು.

ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ನಗರದ ಅಗ್ರಹಾರ ವೃತ್ತದಲ್ಲಿ ಕರ್ನಾಟಕ ಸೇನಾ ಪಡೆ ವತಿಯಿಂದ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಕುವೆಂಪು ಅವರು ನಮ್ಮ ರಾಜ್ಯ ಕಂಡಂತಹ ಮಹಾನ್ ಚೇತನ. ಕನ್ನಡಕ್ಕೆ ಮೊಟ್ಟ ಮೊದಲ ಜ್ಞಾನಪೀಠ ಪ್ರಶಸ್ತಿಯನ್ನು ಗಳಿಸಿದವರು ಎಂದು ಸ್ಮರಿಸಿದರು.

ಮೇಯರ್ ಶಿವಕುಮಾರ್ ಮಾತನಾಡಿ, ರಾಷ್ಟ್ರಕವಿ ಕುವೆಂಪು ಅವರು ಕನ್ನಡ ನೆಲ, ಜಲ, ಭಾಷೆಗಾಗಿ ಜೀವನವಿಡಿ ಹೋರಾಟ ಮಾಡಿದರು. ಕುವೆಂಪು ಅವರು ಕವಿತೆಗಳ ಮೂಲಕ ಸಮಾಜದ ಅಸಮಾನತೆಯನ್ನು ಅಳಿಸಿ ಹಾಕಲು ಶ್ರಮಿಸಿದರು. ಜಗತ್ತಿಗೆ ವಿಶ್ವಮಾನವ ಸಂದೇಶ ಸಾರಿದರು ಎಂದು ಹೇಳಿದರು.

ಇದೇ ವೇಳೆ ನೆರೆದಿದ್ದ ಜನರಿಗೆ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಸಿ.ಜಿ. ಗಂಗಾಧರ್ ಸಿಹಿ ವಿತರಿಸಿದರು. ಸಮಾಜ ಸೇವಕ ಕೆ. ರಘುರಾಮ್, ಕಸಾಪ ಜಿಲ್ಲಾಧ್ಯಕ್ಷ ಮಡ್ಡೀಕೆರೆ ಗೋಪಾಲ್, ಕಾಂಗ್ರೆಸ್ ಮುಖಂಡ ಎನ್.ಎಂ.ನವೀನ್‌ಕುಮಾರ್, ಲಯನ್ಸ್ ಕ್ಲಬ್ ಅಧ್ಯಕ್ಷ ಟಿ. ಸುರೇಶ್, ಕರ್ನಾಟಕ ಸೇನಾ ಪಡೆ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್‌ಗೌಡ, ಜಿಲ್ಲಾ ಒಕ್ಕಲಿಗರ ಸಂಘದ ಕಾರ್ಯದರ್ಶಿ ಚೇತನ್ ಇತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net