ಕೆವಿಜಿ ಬ್ಯಾಂಕ್‌ನಿAದ ಎಸ್‌ಸಿಎಸ್‌ಟಿ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹಧನ

7 Dwd 3Shreekant M. Bhandiwad
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕು ಪರಿಶಿಷ್ಟ ಜಾತಿ- ಪಂಗಡಗಳ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ನಗದು ಪ್ರೋತ್ಸಾಹಧನ ನೀಡಲಿದೆ ಎಂದು ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ ಎಂ. ಭಂಡಿವಾಡ ತಿಳಿಸಿದ್ದಾರೆ.

ಪ್ರಕಟಣೆ ನೀಡಿರುವ ಅವರು, 9 ಜಿಲ್ಲೆಗಳಲ್ಲಿ 10 ಪ್ರಾದೇಶಿಕ ಕಾರ್ಯಾಲಯಗಳನ್ನು ಹೊಂದಿರುವ ಬ್ಯಾಂಕ್, ಪ್ರತಿ ಪ್ರಾದೇಶಿಕ ಕಾರ್ಯಾಲಯ ವ್ಯಾಪ್ತಿಯಲ್ಲಿ 20 ಸರ್ಕಾರಿ ಪ್ರೌಢಶಾಲೆಗಳನ್ನು ಗುರುತಿಸಲಿದೆ. 8, 9 ಮತ್ತು 10ನೇ ತರಗತಿಯಲ್ಲಿ ಗರಿಷ್ಠ ಅಂಕ ಪಡೆದಿರುವ ಪರಿಶಿಷ್ಟ ಜಾತಿ- ಪಂಗಡದ ಪ್ರತಿಭಾನ್ವಿತ ವಿದ್ಯಾರ್ಥಿನಿಗೆ ತಲಾ 5,000 ರೂಪಾಯಿ ಪ್ರೋತ್ಸಾಹಧನ ನೀಡಲಾಗುವುದು. ಇದಕ್ಕಾಗಿ ಈ ಆರ್ಥಿಕ ವರ್ಷದಲ್ಲಿ 30 ಲಕ್ಷ ರೂ. ತೆಗೆದಿರಿಸಿದೆ ಎಂದು ಭಂಡಿವಾಡ ತಿಳಿಸಿದ್ದಾರೆ. ಗ್ರಾಮೀಣ ಬ್ಯಾಂಕ್‌ಗಳು 50ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ಕೆವಿಜಿ ಬ್ಯಾಂಕ್, ಮುಂದಿನ ಆರ್ಥಿಕ ವರ್ಷಪೂರ್ತಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ಭಂಡಿವಾಡ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net