

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ 135ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಜು. 25ರಂದು ಬೆಳಗ್ಗೆ 11 ಗಂಟೆಗೆ ಇಲ್ಲಿನ ಆರ್ಟ್ ಗ್ಯಾಲರಿ ಉದ್ಘಾಟನೆ ಹಾಗೂ ಚಿತ್ರಕಲಾ ಪ್ರದರ್ಶನವನ್ನು ಸಂಘದಲ್ಲಿ ಏರ್ಪಡಿಸಲಾಗಿದೆ. ಬೆಂಗಳೂರಿನ ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಪ.ಸ. ಕುಮಾರ ಉದ್ಘಾಟಿಸುವರು. ಧಾರವಾಡದ ಹಿರಿಯ ಕಲಾವಿದರಾದದ ಎಂ.ಆರ್. ಬಾಳಿಕಾಯಿ, ಬಿ. ಮಾರುತಿ ಮತ್ತು ರೇಣುಕಾ ಮಾರ್ಕಂಡೆ, ಗದಗ ವಿಜಯ ಕಾಲೇಜ್ ಆಫ್ ಫೈನ್ ಆರ್ಟ್ನ ಸಂಸ್ಥಾಪಕ ಪ್ರೊ. ಅಶೋಕ ಅಕ್ಕಿ ಅತಿಥಿಗಳಾಗಿ ಪಾಲ್ಗೊಳ್ಳುವರು. ಸಂಘದ ಅಧ್ಯಕ್ಷ ಚಂದ್ರಕಾAತ ಬೆಲ್ಲದ ಅಧ್ಯಕ್ಷತೆ ವಹಿಸುವರು. ಸಂಗೀತ ವಿದ್ಯಾರ್ಥಿನಿ ಖುಷಿ ಢವಳಿ ಅವರಿಂದ ಸಂಗೀತ ಕಾರ್ಯಕ್ರಮ ಜರುಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.