ಸರ್ಕಾರದ ಯೋಜನೆಗಾಗಿ ಕೆವೈಸಿ ನವೀಕರಣ : ಬಿಸ್ಮಯ್ ಸಮಲ್ ಸಲಹೆ

03
Published on

ಮೂಲ್ಕಿ: ನಮ್ಮ ಉಳಿತಾಯ ಹಣದ ರಕ್ಷಣೆಗಾಗಿ ಕೆವೈಸಿ ನವೀಕರಿಸುವುದು, ನಾಮನಿರ್ದೇಶನ ಮಾಡುವುದು ಬಹಳ ಅಗತ್ಯ. ಗ್ರಾಮೀಣ ಪ್ರದೇಶದ ಜನರ ಆರ್ಥಿಕ ಉನ್ನತಿ ಹಾಗೂ ಸರ್ಕಾರದ ಯೋಜನೆಗಳನ್ನು ಪಡೆಯಲು ಇದು ಅಗತ್ಯ ಎಂದು ಕೆನರಾ ಬ್ಯಾಂಕ್ ಪ್ರಧಾನ ಕಚೇರಿಯ ಜನರಲ್ ಮ್ಯಾನೇಜರ್ ಬಿಸ್ಮಯ್ ಸಮಲ್ ಹೇಳಿದರು. ಪಡುಪಣಂಬೂರು ಪಂಚಾಯಿತಿಯಲ್ಲಿ ವಿಶೇಷ ಆರ್ಥಿಕ ಸೇರ್ಪಡೆ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

ಮಂಗಳೂರಿನ ಕೆನರಾ ಬ್ಯಾಂಕ್ ಪ್ರಬಂಧಕ ಮಂಜುನಾಥ್ ಮಾತನಾಡಿದರು. ಪಂಚಾಯಿತಿ ಉಪಾಧ್ಯಕ್ಷ ಹೇಮನಾಥ್ ಅಮೀನ್ ಅಧ್ಯಕ್ಷತೆ ವಹಿಸಿದ್ದರು. ಕೆನರಾ ಬ್ಯಾಂಕಿನ ಡಿಜಿಎಂ ಲತಾ, ಎಸ್‌ಬಿಐ ಬ್ಯಾಂಕಿನ ಪ್ರಾದೇಶಿಕ ವ್ಯವಸ್ಥಾಪಕ ಕೃಷ್ಣ ಮೋಹನ್, ಪಂಚಾಯಿತಿ ಸದಸ್ಯರಾದ ವಿನೋದ್ ಸಾಲ್ಯಾನ್, ಅಭಿವೃದ್ಧಿ ಅಧಿಕಾರಿ ಸುಧೀರ್, ಲೀಡ್ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕಿ ಕವಿತಾ ಎನ್.ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಪಂಚಾಯಿತಿ ಸಿಬ್ಬಂದಿ, ಕೆನರಾ ಬ್ಯಾಂಕ್, ಎಸ್‌ಬಿಐ ಸಿಬ್ಬಂದಿ, ಅಂಗನವಾಡಿ ಆಶಾ ಕಾರ್ಯಕರ್ತೆಯರು, ಸಂಜೀವಿನಿ, ಸ್ತ್ರೀ ಶಕ್ತಿ ಸ್ವ ಸಹಾಯ ಸಂಘಗಳ ಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ಹಳೆಯಂಗಡಿ ಕೆನರಾ ಬ್ಯಾಂಕ್ ಶಾಖಾ ವ್ಯವಸ್ಥಾಪಕಿ ಅನುಶ್ರೀ ವಂದಿಸಿದರು. ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕ ಲತೇಶ್ ಬಿ. ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net