

ಮಡಿಕೇರಿ:
ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕೊಡವರ ಪರವಾಗಿ ನಡೆಸುತ್ತಿರುವ ಹೋರಾಟದ ಕುರಿತು ದೇಶದ ಆಡಳಿತ ವ್ಯವಸ್ಥೆ ಮತ್ತು ವಿಶ್ವದ ಗಮನ ಸೆಳೆಯಲು ನ.1 ರಂದು ದೆಹಲಿ ಚಲೋ ರ‍್ಯಾಲಿ ನಡೆಸಲು ನಿರ್ಧರಿಸಿರುವುದಾಗಿ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಮಡಿಕೇರಿಯ ಹೊರ ವಲಯದ ಕ್ಯಾಪಿಟಲ್ ವಿಲೇಜ್‌ನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಭಾನುವಾರ ನಡೆದ 29ನೇ ವರ್ಷದ ಸಾರ್ವತ್ರಿಕ ಕೈಲ್ ಪೊಳ್ದ್ ಹಬ್ಬ ಆಚರಣೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೊಡವ ಲ್ಯಾಂಡ್ ಭೌಗೋಳಿಕ ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಬೇಡಿಕೆಗಳ ಹಕ್ಕೊತ್ತಾಯಗಳನ್ನು ಮಂಡಿಸುವ 34ನೇ ವರ್ಷದ “ಕೊಡವ ನ್ಯಾಷನಲ್ ಡೇ” ಕಾರ್ಯಕ್ರಮವನ್ನು ನ.26 ರಂದು ಕ್ಯಾಪಿಟಲ್ ವಿಲೇಜ್‌ನಲ್ಲಿ ಆಚರಿಸಲಾಗುವುದು ಎಂದು ಘೋಷಿಸಿದರು.
ಕೊಡವ ಕುಲದ ಉದ್ಭವ, ವಿಕಾಸ ಮತ್ತು ಕೊಡವ ತಾಯಿನೆಲದ ಸೃಷ್ಟಿ ಈ ಮಣ್ಣಿನಲ್ಲಿ ಆರ್ವಿಭವಿಸಿದೆ. ಯುದ್ಧ ಮತ್ತು ಬೇಟೆಯ ಕೌಶಲ್ಯಗಳು ಬುಡಕಟ್ಟು ಜನಾಂಗದ ಕೊಡವರಲ್ಲಿ ಹುಟ್ಟಿನಿಂದಲೂ ಅಂತರ್ಗತವಾಗಿದೆ. ಶಸ್ತಾçಸ್ತçಗಳನ್ನು ಹೊಂದುವುದು ಯೋಧ ಪರಂಪರೆಯ ಕೊಡವರ ಶಾಶ್ವತ ಹಕ್ಕಾಗಿದೆ. ಈ ಭೂಮಿಯಲ್ಲಿ ಮಾನವ ಸಮುದಾಯದ ಉತ್ಪತ್ತಿಯ ಲಾಗಯಿತು ಕೊಡವ ಯೋಧ ಪ್ರವೃತ್ತಿ ಅನುವಂಶಿಕವಾಗಿ ಬಂದಿದ್ದು, ಅದನ್ನು ಜತನದಿಂದ ಕಾಯ್ದುಕೊಳ್ಳುತ್ತ ಬರಲಾಗಿದೆ. ಬಂದೂಕು ಮತ್ತು ಭೂಮಿಯೊಂದಿಗೆ ಕೊಡವರು ಭಾವನಾತ್ಮಕ ಸಂಬAಧ ಹೊಂದಿದ್ದಾರೆ. ಈ ಹಕ್ಕನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ.
ಭೂ ದೇವಿ, ಜಲದೇವಿ, ವನದೇವಿ, ಪರ್ವತ ದೇವಿ ಮತ್ತು ಪ್ರಕೃತಿ, ಬಂದೂಕ ಮತ್ತು ಮಂದ್‌ಗಳು ಕೊಡವರ ಆತ್ಮ ಮತ್ತು ಹೃದಯದಂತೆ ನಮ್ಮೊಂದಿಗಿದೆ. ಯಾವುದೇ ಒಂದು ಸಿದ್ಧಾಂತ ಕಳೆದು ಹೋದರೂ, ಅದು ಕೊಡವ ಜನಾಂಗಕ್ಕೆ ಪಾರ್ಶ್ವಾವಾಯು ಬಡಿದಂತೆ ದೊಡ್ಡ ವಿಪತ್ತು ಉಂಟಾಗಲಿದೆ.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬರೆದ ಸಂವಿಧಾನದ ಅಡಿಯಲ್ಲಿ ಕೊಡವ ಜನಾಂಗವು ಶಾಸನಬದ್ಧ ರಕ್ಷಣೆಯನ್ನು ಪಡೆಯಬೇಕು. ಇದಕ್ಕಾಗಿ ``ಕೈಲ್ ಪೊಳ್ದ್'' ಹಬ್ಬ ಆಚರಣೆಯ ಈ ಶುಭ ಸಂದರ್ಭದಲ್ಲಿ ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಸೇರಿದಂತೆ ರಾಜ್ಯಾಂಗದತ್ತ ನಿರ್ಣಯಗಳನ್ನು ಮಂಡಿಸುತ್ತಿರುವುದಾಗಿ ಹೇಳಿದರು.
ಕೊಡವಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ ನೀಡಬೇಕು, ಸಂವಿಧಾನದ 6ನೇ ಮತ್ತು 8ನೇ ಶೆಡ್ಯೂಲ್‌ಗಳ ಆರ್ಟಿಕಲ್ 244, 371(ಕೆ) ಆರ್/ಡಬ್ಲೂ÷್ಯ ಅಡಿಯಲ್ಲಿ ಆಂತರಿಕ ರಾಜಕೀಯ ಸ್ವಯಂ-ನಿರ್ಣಯದ ಹಕ್ಕುಗಳೊಂದಿಗೆ ಕೊಡವ ಸ್ವಯಂ ಆಡಳಿತವನ್ನು ಮಾನ್ಯ ಮಾಡಬೇಕು, ವಿಶ್ವ ರಾಷ್ಟç ಸಂಸ್ಥೆ ಕಲ್ಪಿಸಲ್ಪಟ್ಟ ಆದಿಮಸಂಜಾತ ಬುಡಕಟ್ಟು ಜನರ ಹಕ್ಕುಗಳ ಅಡಿಯಲ್ಲಿ ಸ್ವಯಂ-ನಿರ್ಣಯ ಹಕ್ಕುಗಳಿಗಾಗಿ ಘೋಷಿಸಲ್ಪಟ್ಟ ಅಂತರರಾಷ್ಟಿçÃಯ ಕಾನೂನಿನಡಿಯಲ್ಲಿ ಅತ್ಯಂತ ಸೂಕ್ಷö್ಮ ಆದಿಮ ಸಂಜಾತ ಕೊಡವರ ಎಲ್ಲಾ ಹಕ್ಕುಗಳ ರಕ್ಷಣೆಯಾಗಬೇಕು ಮತ್ತಿತರ ನಿರ್ಣಯಗಳನ್ನು ಮಂಡಿಸಲಾಯಿತು.
ಕೊಡವ ಲ್ಯಾಂಡ್‌ಗೆ ಮಾರಕವಾಗಿರುವ ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ವಿಲ್ಲಾ, ಟೌನ್ ಶಿಪ್, ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಮಾಫಿಯಾ ಹಾಗೂ ಕಪ್ಪುಹಣದ ಬಂಡವಾಳಶಾಹಿಗಳ ವಿರುದ್ಧ ಸಿಎನ್‌ಸಿ ಸಂಘಟನೆ ನಡೆಸುತ್ತಿರುವ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದಲ್ಲಿ ಸರ್ವ ಕೊಡವರು ಪಾಲ್ಗೊಳ್ಳಬೇಕು ಎಂದು ಇದೇ ವೇಳೆ ಕರೆ ನೀಡಿದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ಎನ್.ಯು.ನಾಚಪ್ಪ ನೇತೃತ್ವದಲ್ಲಿ “ಕೈಲ್ ಪೊಳ್ದ್” ಪ್ರಯುಕ್ತ "ತೋಕ್ ಪೂವ್" ನಿಂದ ಬಂದೂಕುಗಳನ್ನು ಸಿಂಗರಿಸಿ ಪ್ರಾರ್ಥಿಸಲಾಯಿತು. ಪೂಜ್ಯ ಸ್ಥಾನದಲ್ಲಿರುವ ಗುರುಕಾರೋಣರಿಗೆ ಮೀದಿ ಇಟ್ಟು ಸಿಎನ್‌ಸಿ ಹೋರಾಟಕ್ಕೆ ಬೆಂಬಲ ಕೋರಲಾಯಿತು. ಕೊಡವರು ಹಾಗೂ ಕೊಡವತಿಯರು ಶಸ್ತಾçಸ್ತçಗಳ ಸಾಮೂಹಿಕ ಆರಾಧನೆಯಲ್ಲಿ ಬಂದೂಕು ಮತ್ತು ಒಡಿಕತ್ತಿಯೊಂದಿಗೆ ಪಾಲ್ಗೊಂಡರು. ಗಾಳಿಯಲ್ಲಿ ಗುಂಡು ಹಾರಿಸಿ ಕೋವಿಯ ಹಕ್ಕನ್ನು ಪ್ರತಿಪಾದಿಸಿದರು. ಹಬ್ಬದ ಪ್ರಯುಕ್ತ ನಡೆದ ಕೊಡವ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು.
ಕಲಿಯಂಡ ಮೀನಾ, ಬೊಪ್ಪಂಡ ಬೊಳ್ಳಮ್ಮ, ಪಟ್ಟಮಾಡ ಲಲಿತಾ, ಪುಲ್ಲೇರ ಸ್ವಾತಿ, ಅಪ್ಪಚ್ಚೀರ ರೀನಾ, ನಂದೇಟಿರ ಕವಿತಾ, ಚೋಳಪಂಡ ಜ್ಯೋತಿ, ಬೊಟ್ಟಂಗಡ ಸವಿತಾ, ಅರೆಯಡÀ ಸವಿತಾ, ಮಂದಪAಡ ರಚನ, ನಂದಿನೆರವAಡ ನಿಶಾ, ಪಾಲಂದಿರ ಲೀಲ, ನಂದಿನೆರವAಡ ಬೀನಾ, ಕಲಿಯಂಡ ಪ್ರಕಾಶ್, ಬಾಚರಣಿಯಂಡ ಚಿಪ್ಪಣ್ಣ, ಅಳ್ಮಂಡ ಜೈ, ಕಾಂಡೇರ ಸುರೇಶ್, ಅಪ್ಪಚ್ಚಿರ ರಮ್ಮಿ ನಾಣಯ್ಯ, ಅಜ್ಜಿಕುಟ್ಟೀರ ಲೋಕೇಶ್, ಪಟ್ಟಮಾಡ ಕುಶ ಮತ್ತಿತರರು ಇದ್ದರು.