ಎಲ್.ಐ. ದಿಂಡೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ

15 RON 1
Published on

ರೋಣ: ಎಲ್.ಐ. ದಿಂಡೂರ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಗುರುವಾರ ಮಕ್ಕಳ ದಿನಾಚರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಅಧ್ಯಕ್ಷ ಶಶಿಧರ ದಿಂಡೂರ ಮಾತನಾಡಿ, ವಿದ್ಯಾರ್ಥಿಗಳು ದೇಶದ ಮುಂದಿನ ಪ್ರಜೆಗಳಾಗಿದ್ದು, ಅವರಿಗೆ ಸಂಸ್ಕಾರ ಭರಿತ ಶಿಕ್ಷಣದ ಅಗತ್ಯವಿದೆ. ನಮ್ಮ ಶಾಲೆಯಲ್ಲಿ ಪಠ್ಯ ಚಟುವಟಿಕೆಯ ಜತೆಗೆ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಕಲಿಸಲಾಗುತ್ತದೆ ಎಂದರು. ಮಕ್ಕಳಿಗೆ ವಿವಿಧ ಮನರಂಜನಾ ಚಟುವಟಿಕೆ ಆಯೋಜಿಸಲಾಗಿತ್ತು. ಪಾಲಕರಾದ ವಿದ್ಯಾ ಮಳ್ಳಿ, ಪ್ರತಿಭಾ ಕುರಿ, ಪ್ರಿಯಾಂಕಾ ಕಾಗೆ, ಲಕ್ಷ್ಮಿ ದೊಡ್ಡಮನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net