ಎಲ್.ಕೆ.ಅಡ್ವಾಣಿಗೆ ಭಾರತ ರತ್ನ ಲಭಿಸಿದ್ದು ಹೆಮ್ಮೆಯ ಸಂಗತಿ: ಮಂಡ್ಯ ಲೋಕಸಭಾ ಕ್ಷೇತ್ರದ ಸಂಚಾಲಕ ಸಿ.ಪಿ.ಉಮೇಶ್ ಶ್ಲಾಘನೆ

C.P.Umesh Mandya
Published on

ಮಂಡ್ಯ: ಭಾರತದ ಸಂಸತ್‌ನ ಗೌರವಕ್ಕೆ ಬಹುದೊಡ್ಡ ಘನತೆ ತಂದು ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿ ಹಿಡಿದ ದೇಶ ಕಂಡ ಶ್ರೇಷ್ಟ ರಾಜಕಾರಣಿ ಎಲ್.ಕೆ.ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ ಲಭಿಸಿರುವುದು ಹೆಮ್ಮೆಯ ಸಂಗತಿ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಸಂಚಾಲಕ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸಿ.ಪಿ.ಉಮೇಶ್ ತಿಳಿಸಿದ್ದಾರೆ.

ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ರಕ್ಷಣೆಗಾಗಿ ತಮ್ಮ ಇಡೀ ಜೀವನವನ್ನು ಸಮರ್ಪಿಸಿಕೊಂಡ ತಪಸ್ವಿ ರಾಜಕಾರಣಿಯಾಗಿದ್ದಾರೆ. ಶ್ರೇಷ್ಟ ನೇತಾರ ಅಡ್ವಾಣಿ ಅವರು ತಮ್ಮ ಸಾಧನೆ ಹಾಗೂ ಹೋರಾಟಕ್ಕೆ ಜೀವತಾವಧಿಯಲ್ಲೇ ‘ಭಾರತರತ್ನ’ ಪಡೆಯುತ್ತಿರುವುದು ವಿಶೇಷವಾಗಿದೆ. ಇಂತಹ ಮಹತ್ವದ ನಿರ್ಧಾರ ಕೈಗೊಂಡ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ.

ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಕಟ್ಟಲೇಬೇಕೆಂದು ದೇಶಾದ್ಯಂತ ಸುಮಾರು 10 ಸಾವಿರ ಕಿ.ಮೀ ರಥಯಾತ್ರೆ ನಡೆಸಿ, ಭಾರತೀಯರಲ್ಲಿ ಧಾರ್ಮಿಕ ಜಾಗೃತಿ ಮೂಡಿಸಿದ್ದ ಆಧ್ಯಾತ್ಮಿಕ ಚಿಂತಕರೂ ಆಗಿದ್ದಾರೆ. 1947ರಲ್ಲಿ ಆರ್‌ಎಸ್‌ಎಸ್ ಮೂಲಕ ಸಮಾಜಸೇವೆಗೆ ಧುಮುಕಿದ ಅಡ್ವಾಣಿ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ, ಕೇಂದ್ರದ ವಿರೋಧ ಪಕ್ಷದ ನಾಯಕ, ಕೇಂದ್ರ ಗೃಹ ಸಚಿವ, ಉಪ ಪ್ರಧಾನಿಗಳಾಗಿ ಇಡೀ ದೇಶವೇ ಮೆಚ್ಚುವ ಆಡಳಿತ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net