ಬಿಜೆಪಿ ನಗರಾಧ್ಯಕ್ಷರಾಗಿ ಎಲ್.ನಾಗೇಂದ್ರ, ಜಿಲ್ಲಾಧ್ಯಕ್ಷರಾಗಿ ಎಲ್.ಆರ್.ಮಹದೇವಸ್ವಾಮಿ ನೇಮಕ

CHAMARAJA-BJP-L.NAGENDRA- MLA
Published on

ಮೈಸೂರು: ಭಾರತೀಯ ಜನತಾ ಪಕ್ಷದ ಮೈಸೂರು ನಗರಾಧ್ಯಕ್ಷರನ್ನಾಗಿ ಮಾಜಿ ಶಾಸಕ ಎಲ್.ನಾಗೇಂದ್ರ ಹಾಗೂ ಗ್ರಾಮಾಂತರ ಜಿಲ್ಲಾಧ್ಯಕ್ಷರನ್ನಾಗಿ ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಅವರನ್ನು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇಮಕ ಮಾಡಿದ್ದಾರೆ.

ಎಲ್.ನಾಗೇಂದ್ರ: ವಾಜಿ ಶಾಸಕ ಎಲ್.ನಾಗೇಂದ್ರ ಅವರು ಬಿಜೆಪಿ ನಗರ ಯುವ ಮೋರ್ಚಾ ಉಪಾಧ್ಯಕ್ಷರಾಗಿ, ಕೆ.ಆರ್.ಕ್ಷೇತ್ರದ ಪ್ರಧಾನ ಕಾರ್ಯದರ್ಶಿಯಾಗಿ, ನಗರ ಟಕದ ಪ್ರಧಾನ ಕಾರ್ಯದರ್ಶಿಯಾಗಿ, ಬಳಿಕ ಸ್ಲಮ್ ಮೋರ್ಚಾ ರಾಜ್ಯ ಕಾರ್ಯದರ್ಶಿ, ಸ್ಲಮ್ ಮೋರ್ಚಾ ರಾಜ್ಯಾಧ್ಯಕ್ಷರಾಗಿ ಹಾಗೂ ಮೈಸೂರು ವಿಭಾಗ ಪ್ರಭಾರಿಯಾಗಿ ಪಕ್ಷಕ್ಕೆ ಸೇವೆ ಸಲ್ಲಿಸಿದ್ದಾರೆ. ಮೂರು ಬಾರಿ ಪಾಲಿಕೆ ಸದಸ್ಯರಾಗಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಕೆಲಸ ವಾಡಿದ್ದಾರೆ.

ಎಲ್.ಆರ್.ಮಹದೇವಸ್ವಾಮಿ: ಬಿ.ವೈ.ವಿಜಯೇಂದ್ರ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಎಲ್.ಆರ್.ಮಹದೇವಸ್ವಾಮಿ ವಿಟಿಯು ಎಂಬಿಎ ಪದವೀಧರರಾಗಿದ್ದಾರೆ. ಮೈಸೂರು ತಾಲೂಕು ಪಂಚಾಯಿತಿ ಸದಸ್ಯರಾಗಿ, ತಾಲೂಕು ಪಂಚಾಯಿತಿ ಸಾವಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ತಾಲೂಕು ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ವರುಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಪಕ್ಷ ಕಟ್ಟುವ ಕೆಲಸ ವಾಡಿದ್ದಾರೆ. ಇವರ ತಂದೆ ಲಲಿತಾದ್ರಿಪುರ ರಾಜಣ್ಣ ಕೂಡ ಮುಡಾ ಸದಸ್ಯರಾಗಿ, ಅಲನಹಳ್ಳಿ ಗ್ರಾಪಂ ಅಧ್ಯಕ್ಷರಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net