ಭ್ರಷ್ಟಾಚಾರ ಇಲ್ಲ ಎನ್ನಲು ಮಾನದಂಡ ಏನು ?

santosh lad new
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ಸ್ವಿಸ್ ಬ್ಯಾಂಕಿನಲ್ಲಿ ಭಾರತೀಯರು ಇಟ್ಟಿರುವ ಹಣ 37 ಸಾವಿರ ಕೋಟಿ ರೂ. ಗೆ ಏರಿಕೆಯಾಗಿದೆ. ಹೀಗಿರುವಾಗ ಯಾವ ಮಾನದಂಡದ ಆಧಾರದ ಮೇಲೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಕೇಂದ್ರದಲ್ಲಿ ಭ್ರಷ್ಟಾಚಾರವೇ ಇಲ್ಲ ಎನ್ನುತ್ತಿದ್ದಾರೆ ಎಂದು ಸಚಿವ ಸಂತೋಷ್ ಲಾಡ್ ಪ್ರಶ್ನಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಕ್ಕೆ ಬರುವ ಮುಂಚೆ ಬಿಜೆಪಿಯವರು ವಿದೇಶದಲ್ಲಿರುವ ಕಪ್ಪು ಹಣ ತರುತ್ತೇವೆ ಎಂದು ಹೇಳಿದ್ದರು. ಆಗ, ಸ್ವಿಸ್ ಬ್ಯಾಂಕ್​ನಲ್ಲಿ ಭಾರತೀಯರು ಇಟ್ಟಿರುವ ಹಣ 1700 ಕೋಟಿ ರೂ. ಅಧಿಕೃತವಾಗಿ ಘೊಷಿಸಲಾಗಿತ್ತು. ಈಗ ಏರಿಕೆಯಾಗಿರುವುದರ ಅರ್ಥವೇನು ಎಂದರು.

ಸುಳ್ಳು ಭರವಸೆ ನೀಡಿ ಜನರ ದಿಕ್ಕು ತಪ್ಪಿಸುವುದೇ ಕೇಂದ್ರದ ಕೆಲಸವಾಗಿದೆ. ಬೆಟ್ಟಿಂಗ್ ದಂಧೆ ನಡೆಸುವವರಿಂದ ಹಾಗೂ ಗೋ ಮಾಂಸ ರಫ್ತು ಮಾಡುವವರಿಂದ ಬಿಜೆಪಿ ಚಂದಾ ಎತ್ತಿ ಪಕ್ಷದ ಕಚೇರಿ ನಿರ್ಮಾಣ ಮಾಡುತ್ತಿದೆ ಎಂದು ಆರೋಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net