ಕಾರ್ಮಿಕರ ಮನೆ ಬಾಗಿಲಿಗೆ ಯೋಜನೆ ತಲುಪಿಸಿ - ಸಚಿವ ಶಿವರಾಮ ಹೆಬ್ಬಾರ

310720 Raichur Labor Department Development Meeting
ರಾಯಚೂರಿನಲ್ಲಿ ಕಾರ್ಮಿಕ ಸಚಿವ ಶಿವರಾಜ ಹೆಬ್ಬಾರ ಅಧ್ಯಕ್ಷತೆಯಲ್ಲಿ ಗುರುವಾರ ಸಂಜೆ ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಜರುಗಿತು.
Published on

ರಾಯಚೂರು: ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಯೋಜನೆಗಳನ್ನು ಕಾರ್ಮಿಕರ ಮನೆ ಬಾಗಿಲಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸಂಜೆ ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿರುವವರನ್ನು ಗುರುತಿಸಿ ಆಯಾ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು ದೃಢೀಕರಣ ಪತ್ರ ನೀಡಬೇಕು. ತಂತ್ರಾಂಶದಲ್ಲಿ ಅರ್ಜಿಗಳನ್ನು ಶೀಘ್ರಗತಿಯಲ್ಲಿ ಅಪ್‌ಲೋಡ್ ಆಗದ ಕಾರಣ ಅರ್ಜಿ ಸಲ್ಲಿಸುವ ಅವಧಿಯನ್ನು ಆ.15ರವರೆಗೆ ವಿಸ್ತರಿಸಲಾಗಿದೆ. ಅಗಸರು ಮತ್ತು ಕ್ಷೌರಿಕರಿಗೆ ಪರಿಹಾರ ನೀಡಲು ಸರ್ಕಾರ 165 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಈಗಾಗಲೇ 48,500 ಫಲಾನುಭವಿಗಳಿಗೆ ಪರಿಹಾರ ಧನ ನೀಡಲಾಗಿದೆ. ಉಳಿದವರಿಗೆ ಪರಿಹಾರ ಧನ ಬಿಡುಗಡೆಗೆ ಕ್ರಮಕೈಗೊಳ್ಳಲಾಗುವುದು ಎಂದರು.

ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ, ಜಿ.ಪಂ. ಸಿಇಒ ಲಕ್ಷ್ಮಿಕಾಂತರೆಡ್ಡಿ, ಎಸ್ಪಿ ಡಾ.ಸಿ.ಬಿ.ವೇದಮೂರ್ತಿ, ಅಪರ ಜಿಲ್ಲಾಧಿಕಾರಿ ದುರಗೇಶ್, ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ಜಿಲ್ಲಾ ಕಾರ್ಮಿಕ ಅಧಿಕಾರಿ ಅಕ್ಬರ್ ಮುಲ್ಲಾ, ಉಪ ಆಯುಕ್ತ ಗಿರೀಶ್ ಪಾಟೀಲ್, ಬಾಯ್ಲರ್ ಮತ್ತು ಫ್ಯಾಕ್ಟರಿಸ್‌ನ ಸಹಾಯಕ ನಿರ್ದೇಶಕ ವಿಜಯಕುಮಾರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net