

ಬೆಳಗಾವಿ: ಸರ್ಕಾರವು ಪೆಟ್ರೋಲ್, ಡೀಸೆಲ್ ಮೇಲೆ ವಿಧಿಸುವ ತೆರಿಗೆಯಲ್ಲಿ ಶೇ.1ರಷ್ಟು ಕಾರ್ಮಿಕ ಕಲ್ಯಾಣಕ್ಕೆ ಮೀಸಲಿಟ್ಟರೆ ನೂರಾರು ಕೋಟಿ ರೂ. ಅನುದಾನ ಲಭ್ಯವಾಗಲಿದೆ. ಇದರಿಂದ ಎಲ್ಲ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಲು ಸಾಧ್ಯವಾಗುತ್ತದೆ. ಹೀಗಾಗಿ ಈ ವಿಷಯವಾಗಿ ಎಲ್ಲ ಸಚಿವರು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ನಗರದ ಯಮನಾಪುರ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಮ್ಮಿಕೊಂಡಿದ್ದ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯ ಲೋಕಾರ್ಪಣೆ ಮತ್ತು ಕಾರ್ಮಿಕರಿಗೆ ಸ್ಮಾರ್ಡ್ ಕಾರ್ಡ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
25.45 ಲಕ್ಷ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್: ರಾಜ್ಯದಲ್ಲಿ ನೋಂದಣಿಯಾಗಿರುವ 25.45 ಲಕ್ಷ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ಗಳ ಮೂಲಕ ಸೌಲಭ್ಯ ಕಲ್ಪಿಸಿಕೊಡಲಾಗುತ್ತಿದೆ. ರಾಜ್ಯಾದ್ಯಂತ ಕಾರ್ಮಿಕರ ಮಕ್ಕಳಿಗಾಗಿ ಮೂರು ಕಾರ್ಮಿಕರ ಮಕ್ಕಳ ವಸತಿ ಶಾಲೆ ಮಂಜೂರಾಗಿದ್ದು, ಶ್ರೀದಲ್ಲಿಯೇ ಕಾರ್ಯಾರಂಭ ಮಾಡಲಿವೆ. ಡಾ.ಬಿ.ಆರ್.ಅಂಬೇಡ್ಕರ್ ಸಹಾಯ ಹಸ್ತ ಯೋಜನೆಯಡಿಯಲ್ಲಿ 91 ಅಸಂಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಿ ಅಂದಾಜು 40 ಲಕ್ಷ ಕಾರ್ಮಿಕರನ್ನು ನೋಂದಾಯಿಸಲಾಗಿದೆ. ಅಲ್ಲದೆ, ಕಾರ್ಮಿಕರ ನೋಂದಣಿ, ಕಾರ್ಮಿಕರ ಗುರುತಿನ ಚೀಟಿ ನವೀಕರಣಕ್ಕಾಗಿ ಯಾವುದೇ ಕಾರ್ಮಿಕರು ಕಚೇರಿಗಳಿಗೆ ಅಲೆದಾಡಬಾರದು. ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಲಿದ್ದಾರೆ. ಸರಳ ರೀತಿಯಲ್ಲಿ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದರು. ಶಾಸಕರಾದ ಬಾಬಾಸಾಹೇಬ ಪಾಟೀಲ, ಆಸೀಫ್ ಸೇಠ್, ಬುಡಾ ಅಧ್ಯಕ್ಷ ಲಕ್ಷ$್ಮಣರಾವ ಚಿಂಗಳೆ, ಕಾರ್ಮಿಕ ಕಲ್ಯಾಣ ಮಂಡಳಿ ಸದಸ್ಯ ಎಚ್.ಜಿ.ರಮೇಶ, ಜಾನಿ.ಕೆ.ಪಿ, ಶ್ರೀಯಾನ್ಸ್ ಕುಮಾರ್ ಜೈನ್, ವಿಜಯಕುಮಾರ ಎನ್. ಪಾಟೀಲ, ಸಿಇಒ ಭಾರತಿ.ಡಿ ಇತರರಿದ್ದರು.
ವಿವಿಧ ವಲಯದಲ್ಲಿ ಶ್ರಮಿಸುತ್ತಿರುವ ಕಟ್ಟಡ ಕಾರ್ಮಿಕರ ಗುರುತಿಸಿ, ಅರ್ಹ ಕಾರ್ಮಿಕರಿಗೆ ಇಲಾಖೆ ಸೌಲಭ್ಯ ತಲುಪಿಸಬೇಕು. ಅನಧಿಕೃತ ಕಾರ್ಮಿಕರ ಕಾರ್ಡ್ ಗುರುತಿಸಿ ರದ್ದುಪಡಿಸಬೇಕು. ಕಾರ್ಡ್ಗಳ ನವೀಕರಣ ಕಾರ್ಯ ಸರಳೀಕರಣಗೊಳಿಸಬೇಕು. ಹೆಬ್ಬಾಳ್ಕರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ