ಸರ್ಕಾರಕ್ಕೆ ಕಾರ್ಮಿಕ ಘಟಕ ಅಭಿನಂದನೆ

karmikamandali
Published on

ಮಡಿಕೇರಿ: ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ನಿರಂತರ ಹೋರಾಟದ ಫಲವಾಗಿ ಸಾರಿಗೆ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುವ ಚಾಲಕರು ಮತ್ತು ಇತರೆ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ರಚಿಸಲು ಸಚಿವ ಸಂಪುಟ ನಿರ್ಧರಿಸಿದ್ದು, ರಾಜ್ಯ ಅಲ್ಪಸಂಖ್ಯಾತ ಕಾರ್ಮಿಕ ಘಟಕದ ಕೊಡಗು ಜಿಲ್ಲಾ ಘಟಕ ಅಭಿನಂದನೆ ಸಲ್ಲಿಸಿದೆ.


ಚಾಲಕರು ಮತ್ತು ಇತರೆ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ರಚನೆಗಾಗಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಾ ಬರಲಾಗಿದೆ. ಹೋರಾಟದ ಪರಿಣಾಮವಾಗಿ ಮಂಡಳಿ ರಚನೆಗೆ ಸರ್ಕಾರ ಮುಂದಾಗಿದ್ದು, ಅಸಂಘಟಿತ ಕಾರ್ಮಿಕರ ಸಂಘಕ್ಕೆ ಜಯ ಸಿಕ್ಕಿದೆ ಎಂದು ಸಂಘದ ಜಂಟಿ ಕಾರ್ಯದರ್ಶಿ ಬಿ.ಕೆ.ರೂಪಶ್ರೀ ಸುದ್ದಿಗೋಷ್ಠಿಯಲ್ಲಿ ಹೇಳಿದರು.


ವಾಹನಗಳಿಗೆ ಸಂಬಂಧಿಸಿದಂತೆ ಕಾರ್ಮಿಕರಿಗೆ ಮಾಹಿತಿ ಕಾರ್ಯಾಗಾರ ನಡೆಸಲು ಕಾರ್ಮಿಕ ಇಲಾಖೆಗೆ ಸರ್ಕಾರ ಸೂಚನೆ ನೀಡಬೇಕು. ಇದರಿಂದ ಚಾಲಕರು, ಕ್ಲೀನರ್ ಹಾಗೂ ನಿರ್ವಾಹಕರಿಗೆ ಕಾರ್ಮಿಕ ಇಲಾಖೆಯಿಂದ ಸಿಗುವ ೫ ಲಕ್ಷ ಅಪಘಾತ ವಿಮೆಗೆ ಅರ್ಜಿ ಸಲ್ಲಿಸಲು ಅನುಕೂಲವಾಗಲಿದೆ ಎಂದರು.


ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷರಾದ ರೆಹಮತ್, ಎಚ್.ಜೆ.ಜ್ಯೋತಿ, ಮಾಧ್ಯಮ ಕಾರ್ಯದರ್ಶಿ ಎಚ್.ಪಿ.ಮಹದೇವ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net