

ಕುಂದಾಪುರ: ಕೂಲಿ ಕೆಲಸ ಮಾಡಿಕೊಂಡಿದ್ದ ಹೆಮ್ಮಾಡಿ ಗ್ರಾಮ ಸಂತೋಷ ನಗರ ನಿವಾಸಿ ಚಂದ್ರ(51) ಎಂಬುವರು ಹೆಮ್ಮಾಡಿ ಗ್ರಾಮದ ಕಾಮತರ ಹಾಡಿಯಲ್ಲಿ ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟಿಬಿ, ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ತನಗಿರುವ ಕಾಯಿಲೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.