

ಚಿಕ್ಕಬಳ್ಳಾಪುರ: ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ಕೆಮಿಕಲ್ ವಾಹನದ ಮೇಲಿಂದ ಬಿದ್ದು ಒಬ್ಬ ಕಾರ್ಮಿಕ ಮೃತಪಟ್ಟು, ಮತ್ತಿಬ್ಬರು ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಿಹಾರ ಮೂಲದ ಮಹಮದ್ ರಜೀಕ್ (33) ಮೃತ ಕಾರ್ಮಿಕ. ವಿಕಾಸ್ ಹಾಗೂ ಸೋನು ಎಂಬ ಸಹ ಕಾರ್ಮಿಕರು ಉಸಿರಾಟದ ಸಮಸ್ಯೆಯಿಂದ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿನ ರಾಮ್ ಕೀ ಕೆಮಿಕಲ್ ತಯಾರಿಕಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು, ಟ್ಯಾಂಕರ್ ಲಾರಿಯ ಕೆಮಿಕಲ್ ವಾಸನೆಗೆ ಅಸ್ವಸ್ಥಗೊಂಡಿದ್ದಾರೆ. ಇದೇ ವೇಳೆ ವಾಹನ ಮೇಲಿಂದ ಬಿದ್ದು ರಜೀಕ್ ಮೃತಪಟ್ಟಿದ್ದಾರೆ. ದುರ್ಟನೆಯು ಕಂಪನಿಯ ಮಾಲೀಕರ ರ್ನಿಲಕ್ಷ$್ಯದಿಂದ ನಡೆದಿದ್ದು ಕಾರ್ಮಿಕ ಇಲಾಖೆಯ ಅಧಿಕಾರಿಗಳು ಸಹ ಕಾರ್ಮಿಕ ಸುರಕ್ಷತೆಯ ಖಾತ್ರಿಪಡಿಸುವಲ್ಲಿ ನಿಗಾ ವಹಿಸುವಲ್ಲಿ ವಿಲರಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ನಂದಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.