ಹಾಸನದ ಕೈಗಾರಿಕಾ ಪ್ರದೇಶದಲ್ಲಿ ಕಾರು ಶೋ ರೂಂ ಕಾಂಪೌಂಡ್ ಕುಸಿದು ಕಾರ್ಮಿಕ ಸಾವು

9HSN1
ಮಣ್ಣಿನಡಿಯಲ್ಲಿ ಸಿಲುಕಿರುವ ಕಾರ್ಮಿಕ ಮೃತದೇಹ ಹೊರತೆಗೆಯುತ್ತಿರುವ ಅಗ್ನಿಶಾಮಕ ಸೇವೆಗಳ ಸಿಬ್ಬಂದಿ
Published on

ಹಾಸನ: ನಗರದ ಡೇರಿ ವೃತ್ತದ ಬಳಿಯಲ್ಲಿರುವ ಕೈಗಾರಿಕಾ ಕೇಂದ್ರದಲ್ಲಿ ಗುರುವಾರ ಸಂಜೆ ನಿರ್ಮಾಣ ಹಂತದಲ್ಲಿದ್ದ ಕಾರು ಮಾರಾಟ ಶೋರೂಂನ ಕಾಂಪೌಂಡ್ ಕುಸಿದು ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

ದಾವಣಗೆರೆ ಜಿಲ್ಲೆ ಹರಪನಹಳ್ಳಿ ತಾಲೂಕಿನ ಜಮ್ಮನಹಳ್ಳಿ ಗ್ರಾಮದ ಹನುಮಂತಪ್ಪ (45) ಮೃತರು. ಸಂಜೆ 5.30ರ ಸಮಯದಲ್ಲಿ ಕಾಂಪೌಂಡ್ ಅಡಿಪಾಯ ದುರಸ್ತಿ ಕಾರ್ಯದಲ್ಲಿ  ತೊಡಗಿದ್ದ ಕಾರ್ಮಿಕನ ಮೇಲೆ ಗೋಡೆ ಹಾಗೂ ಮೇಲಿನಿಂದ ಮಣ್ಣು ಕುಸಿದು ಬಿತ್ತು. ತಕ್ಷಣ ಸ್ಥಳದಲ್ಲಿದ್ದ ಇತರ ಕಾರ್ಮಿಕರು ಸಾಕಷ್ಟು ಯತ್ನಿಸಿದರೂ ಮಣ್ಣು ಹಾಗೂ ಕಲ್ಲುಗಳನ್ನು ಸರಿಸಲು ಸಾಧ್ಯವಾಗಲಿಲ್ಲ.

ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಬಡಾವಣೆ ಠಾಣೆ ಪೊಲೀಸರು ಶವ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.ಕಾರ್ ಶೋ ರೂಂ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಸುರಕ್ಷತಾ ಕ್ರಮಗಳನ್ನು ಪಾಲನೆ ಮಾಡದಿರುವುದರಿಂದಲೇ ಕಾರ್ಮಿಕ ಮೃತಪಟ್ಟಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net