ಹುಬ್ಬಳ್ಳಿ: ಇಲ್ಲಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ವಸಂತ ಲದವಾ ನೇಮಕಗೊಂಡಿದ್ದಾರೆ.
ರಾಜ್ಯಪಾಲರು ಈ ನೇಮಕ ಮಾಡಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮತಿ ಸಂಯೋಜಕರಾಗಿರುವ ಲದವಾ ಅವರು ಈ ಹಿಂದೆ ಇಲ್ಲಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.