ಹತ್ತಾರು ಜನರ ಎದುರೇ ವಕೀಲೆ ಮೇಲೆ ಹಲ್ಲೆ; ಆರೋಪಿಯ ಬಂಧನ..

Bagalakote 4
ಆಸ್ಪತ್ರೆಗೆ ದಾಖಲಾಗಿರುವ ವಕೀಲೆಯನ್ನು ಮಾಜಿ ಸಚಿವ ಎಚ್​.ವೈ. ಮೇಟಿ ಮುಂತಾದವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
Published on

ಬಾಗಲಕೋಟೆ: ರಸ್ತೆ ಬದಿಯಲ್ಲಿ ಹತ್ತಾರು ಜನರ ಎದುರೇ ವಕೀಲೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಗಂಭೀರವಾಗಿ ಹಲ್ಲೆ ನಡೆಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ. ಮಾತ್ರವಲ್ಲ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಗೀತಾ ಸಿಕ್ಕೇರಿ ಎಂಬಾಕೆ ಹಲ್ಲೆಗೊಳಗಾದ ವಕೀಲೆ. ಮಹಾಂತೇಶ್ ಚೊಳಚಗುಡ್ಡ ಎಂಬಾತ ಬಂಧನಕ್ಕೆ ಒಳಗಾಗಿರುವ ಆರೋಪಿ. ಬಾಗಲಕೋಟೆಯಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿತ್ತು. ಸಂಜೆಯೊಳಗಾಗಿ ಬಾಗಲಕೋಟೆ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.

ರಸ್ತೆ ಬದಿಯಲ್ಲಿ ಸಾರ್ವಜನಿಕರ ಎದುರೇ ಸಂಗೀತಾ ಮೇಲೆ ಮಹಾಂತೇಶ್ ಹಲ್ಲೆ ನಡೆಸಿದ್ದು, ಒದೆ ಕೂಡ ಕೊಟ್ಟಿದ್ದಾನೆ. ಈ ಸಂದರ್ಭದಲ್ಲಿ ಆಕೆಯ ಜತೆಗಿದ್ದ ಪತಿಗೂ ಹಲ್ಲೆ ಮಾಡಿದ್ದಾನೆ. ಗಾಯಗೊಂಡ ಇಬ್ಬರನ್ನೂ ಬಳಿಕ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಲ್ಲೆಯ ದೃಶ್ಯಾವಳಿ ಇರುವ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರಿಂದ ವ್ಯಾಪಕ ಟೀಕೆ ಕೂಡ ವ್ಯಕ್ತವಾಗಿದೆ. ಆರೋಪಿ ಮಹಾಂತೇಶ್​ನನ್ನು ಬಂಧಿಸಿದ್ದು ನ್ಯಾಯಾಲಯಕ್ಕೆ ಒಪ್ಪಿಸಲಾಗುವುದು ಎಂದು ಎಸ್​​ಪಿ ಲೋಕೇಶ್ ಜಗಲಾಸರ್ ತಿಳಿಸಿದ್ದಾರೆ.

ಮತ್ತೊಂದೆಡೆ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ಮಾಜಿ ಸಚಿವ ಎಚ್.ವೈ. ಮೇಟಿ ಸೇರಿ ಕಾಂಗ್ರೆಸ್​ನ ಹಲವು ಮುಖಂಡರು ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಹಲ್ಲೆ ಘಟನೆಯನ್ನು ಖಂಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net