

ನೆಲಮಂಗಲ: ಲಾರಿಯೊಂದು ಪ್ಯಾಸೆಂಜರ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮಹಿಳೆಯೊಬ್ಬರು ಗಂಭೀರ ಗಾಯಕ್ಕೊಳಗಾಗಿ ಸಾವಿಗೀಡಾಗಿದ್ದಾರೆ. ಮಾತ್ರವಲ್ಲ, ಇನ್ನೂ ನಾಲ್ಕೈದು ಮಂದಿಗೆ ಗಾಯಗಳಾಗಿವೆ.
ನೆಲಮಂಗಲದ ದಾಬಸ್ ಪೇಟೆ ಬಳಿಯ ಲಾರಿಯೊಂದು ಪ್ಯಾಸೆಂಜರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪ್ಯಾಸೆಂಜರ್ ವಾಹನ ಜಖಂಗೊಂಡಿದ್ದು, ಅದರಲ್ಲಿದ್ದ ಗುಬ್ಬಿ ಮೂಲದ ರಾಧಾ (35) ಗಂಭೀರವಾಗಿ ಗಾಯಗೊಂಡಿದ್ದರು.
ಗಾಯಾಳುವನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ರಾಧಾ ಜತೆಗಿದ್ದ ಇತರ ನಾಲ್ಕೈದು ಮಂದಿಗೂ ಸಣ್ಣಪುಟ್ಟ ಗಾಯಗಳಾಗಿವೆ. ನೆಲಮಂಗಲ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.