ಪೊಲೀಸ್ ಇನ್‌ಸ್ಪೆಕ್ಟರ್‌ಗೇ ಅಶ್ಲೀಲ ಫೋಟೋ ಕಳುಹಿಸಿ ಬೆದರಿಕೆಯೊಡ್ಡಿದ ಮಹಿಳೆ

Crime
Published on

ಬೆಂಗಳೂರು: ಪೊಲೀಸ್ ಇನ್‌ಸ್ಪೆಕ್ಟರ್ ಮೊಬೈಲ್‌ ಫೋನ್​ಗೆ ಅಶ್ಲೀಲ ಫೋಟೋ ಕಳುಹಿಸಿ 11 ಸಾವಿರ ರೂ. ನೀಡುವಂತೆ ಮಹಿಳೆ ಬೆದರಿಕೆ ಒಡ್ಡಿರುವ ಪ್ರಕರಣ ಕೇಂದ್ರ ವಿಭಾಗ ಸಿಇಎನ್ ಠಾಣೆಯಲ್ಲಿ ದಾಖಲಾಗಿದೆ. ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಇನ್‌ಸ್ಪೆಕ್ಟರ್ ಸಿ. ದಯಾನಂದ ಈ ಕುರಿತು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಡಿ.8ರ ರಾತ್ರಿ 8.30ರ ಸುಮಾರಿಗೆ ಅಪರಿಚಿತ ಮೊಬೈಲ್ ನಂಬರ್‌ನಿಂದ ಇನ್‌ಸ್ಪೆಕ್ಟರ್ ಅವರಿಗೆ ವಾಟ್ಸ್‌ಆ್ಯಪ್‌ ವಿಡಿಯೋ ಕಾಲ್ ಬಂದಿದ್ದು, ಅದನ್ನು ಸ್ವೀಕರಿಸಿದ್ದಾರೆ. ಅದರಲ್ಲಿ ಮಹಿಳೆ ಅಶ್ಲೀಲ ವಿಡಿಯೋ ತೋರಿಸುತ್ತಿದ್ದು, ತಕ್ಷಣ ದಯಾನಂದ್ ಕರೆಯನ್ನು ಕಟ್ ಮಾಡಿದ್ದಾರೆ. ಆನಂತರ ವಿಡಿಯೋದ ಸ್ಕ್ರೀನ್ ಶಾಟ್ ತೆಗೆದುಕೊಂಡು ಇನ್‌ಸ್ಪೆಕ್ಟರ್ ಮೊಬೈಲ್‌ ಫೋನ್​ಗೆ ವಾಟ್ಸ್‌ಆ್ಯಪ್ ಸಂದೇಶ ಕಳುಹಿಸಿ 11 ಸಾವಿರ ರೂ. ನೀಡುವಂತೆ ಬೇಡಿಕೆ ಒಡ್ಡಿದ್ದಾರೆ. ಇಲ್ಲವಾದರೆ, ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿ ಸ್ನೇಹಿತರಿಗೆ ಕಳುಹಿಸಿ ಮರ್ಯಾದೆ ತೆಗೆಯುವುದಾಗಿ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಮೊಬೈಲ್ ಫೋನ್​ ನಂಬರ್ ಆಧರಿಸಿ ತನಿಖೆ ಕೈಗೊಂಡಿರುವುದಾಗಿ ಸೈಬರ್ ಕ್ರೈಂ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net